ಕುಂದಾಪುರ: ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ಪರಮಾಧಿಕಾರಕ್ಕೆ ಬಿಟ್ಟಿದ್ದು, ಕೇಂದ್ರ ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ. ನನಗೆ ಯಾವುದೇ ಅಸಮಾಧಾನ ಇಲ್ಲ. ನಾನು ಸಮಾಧಾನದಲ್ಲಿಯೇ ಇದ್ದೇನೆ ಎಂದು ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.ಕುಂದಾಪುರದಲ್ಲಿ ಸುದ್ಧಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಗ್ರಾಮ ಪಂಚಾಯತಿ ಚುನಾವಣೆ ಬಿಜೆಪಿ ಬೆಂಬಲಿತರ ಗೆಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಪಂಚಾಯತ್ ರಾಜ್ ಕಾಯ್ದೆಯಲ್ಲಿ ಪಂಚಾಯತಿ ಚುನಾವಣೆಯಲ್ಲಿ ಪಕ್ಷ ಇಲ್ಲ.
ಪಕ್ಷದ ಬೆಂಬಲಿತರು ಎಂದು ಹೇಳುವುದು ಸರಿಯಲ್ಲ. ಪಕ್ಷ ರಹಿತವಾದ ಚುನಾವಣೆ ಅಷ್ಟೆ ಎಂದರು.ಕುಂದಾಪುರ ಮೇಲ್ಸೆತುವೆ ಬಗ್ಗೆ ಉತ್ತರಿಸಿದ ಅವರು ಶೀಘ್ರ ಕಾಮಗಾರಿ ಮುಕ್ತಾಯವಾಗುತ್ತದೆ ಎಂದರು.
Kshetra Samachara
16/01/2021 09:26 pm