ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಯತ್ನಾಳ್ ಗೆ ಮತ್ತೆ ಎಚ್ಚರಿಕೆ ನೀಡಿದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ

ಪುತ್ತೂರು: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ದರೆ ಕೇಂದ್ರ ನಾಯಕರು ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವುದು ಖಂಡಿತಾ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಿದ್ದ ಸಂದರ್ಭದಲ್ಲೂ ಬಸವನಗೌಡ ಪಾಟೀಲ್ ಯತ್ನಾಳ್ ಇದೇ ರೀತಿಯಾಗಿ ವರ್ತಿಸಿದ್ದರು. ಹಲವು ಎಚ್ಚರಿಕೆಯ ಬಳಿಕವೂ ಅವರು ತಮ್ಮ ವರ್ತನೆಯನ್ನು ಸರಿಪಡಿಸದ ಕಾರಣಕ್ಕೆ ನಾನೇ ಅವರನ್ನು ಆಗ ಪಕ್ಷದಿಂದ ಉಚ್ಚಾಟಿಸಿದ್ದೆ. ಇದೀಗ ಮತ್ತೆ ಅಂತಹದ್ದೇ ವರ್ತನೆಯನ್ನು ತೋರಿಸಲು ಆರಂಭಿಸಿದ್ದಾರೆ. ಪಕ್ಷದ ವಿರುದ್ಧ, ಪಕ್ಷದ ನಾಯಕರ ವಿರುದ್ಧ ಬೀದಿಯಲ್ಲಿ ಚರ್ಚೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಸ್ಥಾನಕ್ಕಾಗಿ ಯತ್ನಾಳ್ ಈ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ ಎನ್ನುವುದು ನಾಯಕರ ಗಮನಕ್ಕೆ ಬಂದಿದ್ದು ಪಕ್ಷಕ್ಕೆ, ಪಕ್ಷದ ನಾಯಕರಿಗೆ ಸಲಹೆ ಕೊಡುವ ಕೆಲಸವನ್ನು ಯತ್ನಾಳ್ ನಿಲ್ಲಿಸಬೇಕು. ಯತ್ನಾಳ್ ಸಲಹೆ ಕೇಳುವಂತಹ ಮಟ್ಟದಲ್ಲಿ ಪಕ್ಷ ಈಗ ಇಲ್ಲ. ವಾಜಪೇಯಿ ಸರಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿದ್ದ ಯತ್ನಾಳ್, ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಇದೇ ರೀತಿಯ ವರ್ತನೆಯನ್ನು ಮುಂದುವರಿಸಿದಲ್ಲಿ ಕೇಂದ್ರ ನಾಯಕರು ಅವರ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳುತ್ತಾರೆ ಎಂದರು.

Edited By : Manjunath H D
Kshetra Samachara

Kshetra Samachara

19/01/2021 05:16 pm

Cinque Terre

15.08 K

Cinque Terre

1

ಸಂಬಂಧಿತ ಸುದ್ದಿ