ಕಾಪು: ಶ್ರಮಜೀವಿ ಮೀನುಗಾರರ ಸುರಕ್ಷತೆಗೆ ರಾಜ್ಯ ಸರಕಾರ ಒತ್ತು ನೀಡುತ್ತಿದೆ. ಕೈಗಾರಿಕೆ, ಉದ್ದಿಮೆ ಸ್ವರೂಪ ಹೊಂದಿರುವ ಮೀನುಗಾರಿಕೆ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧ ಎಂದು ಮುಖ್ಯಮಂತ್ರಿ ಬಿ. ಎಸ್. ಯುಡಿಯೂರಪ್ಪ ಹೇಳಿದರು.
ಅವರು ಹೆಜಮಾಡಿ ಕೋಡಿಯಲ್ಲಿ ಇಂದು 180.84 ಕೋಟಿ ರೂ. ನ ಕೇಂದ್ರ ಹಾಗೂ ರಾಜ್ಯಗಳ ಸಮಪಾಲಿನ ಯೋಜನೆಯಾದ ಹೆಜಮಾಡಿಯ ಸರ್ವಋತು ಮೀನುಗಾರಿಕೆ ಬಂದರಿಗೆ ಶಂಕುಸ್ಥಾಪನೆ ಮಾಡಿ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯವು 320 ಕಿ.ಮೀ. ಕರಾವಳಿ ತೀರ ಮತ್ತು 8000 ಹೆಕ್ಟೇರ್ ಗೂ ಅಧಿಕ ಹಿನ್ನೀರಿನ ಪ್ರದೇಶ ಹೊಂದಿದ್ದು, ದೇಶದ ಮೀನುಗಾರಿಕೆ ವಲಯಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ ಎಂದರು.
ಮುಖ್ಯಅತಿಥಿ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಬಂದರು ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯೋಜನೆ ಕುರಿತಾಗಿ ಪ್ರಸ್ತಾವಿಸಿದರು.
ಉಡುಪಿ ಶಾಸಕ ರಘುಪತಿ ಭಟ್, ಮುಲ್ಕಿ - ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಜೀವರಾಜ್, ಕಾಪು ತಾಪಂ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಮೀನುಗಾರಿಕೆ ನಿರ್ದೇಶಕ ರಾಮಾಚಾರ್ಯ, ಕೆಎಫ್ ಡಿಸಿ ಅಧ್ಯಕ್ಷ ನಿತಿನ್ ಕುಮಾರ್, ದ.ಕ.- ಉಡುಪಿ ಸಹಕಾರಿ ಮೀನು ಮಾರಾಟ ಮಹಾ ಮಂಡಳ ಅಧ್ಯಕ್ಷ ಯಶಪಾಲ್ ಸುವರ್ಣ, ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಪಂ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಪಂ ಸದಸ್ಯೆ ರೇಣುಕಾ ಪುತ್ರನ್, ಮೀನುಗಾರ ಮುಖಂಡರಾದ ಡಾ.ಜಿ. ಶಂಕರ್, ಆನಂದ ಸಿ. ಕುಂದರ್, ಸದಾಶಿವ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಮೊಗವೀರ ಸಮಾಜದ ಪರವಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸಲಾಯಿತು. ಕೃಷಿ ಹಾಗೂ ಮೀನುಗಾರಿಕೆ ಇಲಾಖೆಯ ಮುಖ್ಯ ಅಪರ ಕಾರ್ಯದರ್ಶಿ ಡಾ.ಜಿ. ಕಲ್ಪನಾ ಸ್ವಾಗತಿಸಿದರು. ನಾಗರಾಜ್ ಜಿ. ಎಸ್. ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
Kshetra Samachara
19/01/2021 05:43 pm