ಕೋಟ: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಫೇಸ್ ಬುಕ್ ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನಾತ್ಮಕ ಪೋಸ್ಟ್ ಮಾಡಿದ್ದ ಯುವಕನ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೆರ್ಡೂರಿನ ಅನಿಲ್ ಕುಮಾರ್ ಶೆಟ್ಟಿ ಎಂಬಾತನೇ ಸಚಿವರ ವಿರುದ್ಧ ನಿಂದನಾತ್ಮಕ ಪೋಸ್ಟ್ ಮಾಡಿದವ. ಬಿಲ್ಲವ ಈಡಿಗ ಉಪಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒಟ್ಟು 50 ಕೋಟಿ ರೂ.ವನ್ನು ಬಜೆಟ್ ನಲ್ಲಿ ಮೀಸಲಿಡುವಂತೆ ಕೋರಿ ಸಚಿವ ಶ್ರೀನಿವಾಸ್ ಪೂಜಾರಿ ಅವರು ಇತ್ತೀಚೆಗೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿ ಚಿತ್ರ ಬಳಸಿಕೊಂಡು ರಾಜಕೀಯ ರೀತಿಯಲ್ಲಿ ಅನಿಲ್ ಕುಮಾರ್ ಶೆಟ್ಟಿ ಅವಾಚ್ಯ ಶಬ್ದಗಳನ್ನು ಬಳಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಗಮನಿಸಿದ ಆರೋಪಿಯು ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾನೆ ಮತ್ತು ತನ್ನ ಫೇಸ್ ಬುಕ್ ಅಕೌಂಟ್ ನ್ನು ಯಾರೋ ಹ್ಯಾಕ್ ಮಾಡಿದ್ದಾರೆ ಎಂದು ಬಡಬಡಿಸಿದ್ದಾನೆ. ಈ ಪ್ರಕರಣ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದೆ.
Kshetra Samachara
21/01/2021 11:50 am