ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ಅತಿಥಿ ಉಪನ್ಯಾಸಕರನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿ"

ಉಡುಪಿ: ಪ್ರಸಕ್ತ 2020 - 21ನೇ ಶೈಕ್ಷಣಿಕ ಸಾಲಿನಲ್ಲಿ 2019 - 2020 ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಯಥಾ ಸ್ಥಿತಿಯಲ್ಲಿ ಮುಂದುವರಿಸಬೇಕು ಮತ್ತು ಅವರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಅತಿಥಿ ಉಪನ್ಯಾಸಕರು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿ,ಅತಿಥಿ ಉಪನ್ಯಾಸಕರಲ್ಲಿ ಶೇ. 50ರಷ್ಟು ಅತಿಥಿ ಉಪನ್ಯಾಸಕರನ್ನು ಮಾತ್ರ ತುರ್ತಾಗಿ ನೇಮಿಸಿಕೊಂಡು ಮಾರ್ಚ್ 2021ರ ವರೆಗೆ ಮಾತ್ರ ಅವರ ಸೇವೆಯನ್ನು ಬಳಸಬೇಕೆನ್ನುವ ಅವೈಜ್ಞಾನಿಕ ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾದ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.

ಹೊಸ ರಾಷ್ಟ್ರೀಯ ಉನ್ನತ ಶಿಕ್ಷಣ ನೀತಿಯನ್ವಯ ಹಾಗೂ ಕೋವಿಡ್ 19 ಮಾರ್ಗಸೂಚಿಯನ್ವಯ ಪ್ರತಿ ತರಗತಿಯಲ್ಲಿ40-50 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು.

ಕೋವಿಡ್ 19 ನಿಯಮಾವಳಿ ಅನ್ವಯ ಕಟ್ಟುನಿಟ್ಟಾಗಿ ಪದವಿ ಕಾಲೇಜುಗಳಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಶೇ. 50ರಷ್ಟು ವಿದ್ಯಾರ್ಥಿಗಳಿಗೆ ಒಂದು ತರಗತಿಯನ್ನು ವಿಭಾಗಿಸಬೇಕು ಎಂದು ಆಗ್ರಹಿಸಿದ್ದಾರೆ.ಇದಲ್ಲದೆ ಆಗಸ್ಟ್ ನಂತರ ಅತಿಥಿ ಉಪನ್ಯಾಸಕರಿಗೆ ತಿಂಗಳ ಸಂಬಳ ಬಂದಿಲ್ಲ, ಇದನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

22/01/2021 04:36 pm

Cinque Terre

9.61 K

Cinque Terre

0

ಸಂಬಂಧಿತ ಸುದ್ದಿ