ಮಂಗಳೂರು: ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿರೋ ಘಟನೆ ಖಂಡಿಸಿ ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ತೊಕ್ಕೊಟ್ಟುವಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಇದೇ ವೇಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ನಾಯಕರು, ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಗುಡುಗಿದರು.
ಇನ್ನು ಮಂಗಳೂರು ಸುತ್ತಮುತ್ತಲಿನ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿರುವ
ಘಟನೆಯನ್ನು ಖಂಡಿಸಿ ವಿಹಿಂಪ ಕರಾವಳಿಯ ಎಲ್ಲ ದೇವಸ್ಥಾನ, ದೈವಸ್ಥಾನಗಳಲ್ಲಿ ಶುಕ್ರವಾರ ಸಾಮೂಹಿಕ ಪ್ರಾರ್ಥನೆಗೆ ಕರೆ ನೀಡಿದೆ.
ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಪವಿತ್ರಗೊಳಿಸುವ ಕುಕೃತ್ಯ ನಿರಂತರವಾಗಿ ನಡೆಯುತ್ತಿದೆ. ಅದರಲ್ಲಿ ಮಂಗಳೂರಿನ ಕಂಕನಾಡಿ ಗರೋಡಿ ದೈವಸ್ಥಾನ ಸೇರಿದಂತೆ ಅನೇಕ ದೇವಸ್ಥಾನ- ದೈವಸ್ಥಾನಗಳನ್ನು ದಾರಿ ತಪ್ಪಿದ ದುಷ್ಕರ್ಮಿಗಳು ಅಪವಿತ್ರ ಗೊಳಿಸಿದ್ದಾರೆ. ಇದನ್ನು ನಾವು ಬಲವಾಗಿ ಖಂಡಿಸುತ್ತಿದ್ದು, ಕೂಡಲೇ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸುವಂತೆ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಆಗ್ರಹಿಸಿದ್ದಾರೆ.
Kshetra Samachara
25/01/2021 08:56 pm