ಮಂಗಳೂರು: ತಾಕತ್ತಿದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ಎಂದು ಆರ್‌ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರು ಉಳ್ಳಾಲದ ಜನರಿಗೆ ಸವಾಲ್ ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಪದೇ ಪದೇ ಮುಸ್ಲಿಮರು ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಪಾಕಿಸ್ತಾನದಲ್ಲಿ ಮತ್ತೆ ಮತ್ತೆ ಮುಸ್ಲಿಮರೇ ಆಯ್ಕೆಯಾಗುತ್ತಿದ್ದಾರೆ. ಇದೇ ಸ್ಥಿತಿ ಉಳ್ಳಾಲದಲ್ಲೂ ಆರಂಭವಾಗಿದೆ ಎಂದರು.
ಉಳ್ಳಾಲದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಕೆಲ ದುಷ್ಕರ್ಮಿಗಳು ದೇವಸ್ಥಾನಗಳ ಕಾಣಿಕೆ ಹುಂಡಿಗೆ ಬೇಡದ ವಸ್ತುಗಳನ್ನು ಹಾಕುತ್ತಿದ್ದಾರೆ. ಇದು ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತ ಕೆಲಸವಾಗಿದೆ. ಹಾಗಾಗಿ ಈಗಲೇ ಎಚ್ಚೆತ್ತುಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದರು.
Kshetra Samachara
28/01/2021 04:54 pm