ಉಡುಪಿ: ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಅವರು ಶಾಸಕ ಕೆ. ರಘುಪತಿ ಭಟ್ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಂ. ಚಂದ್ರಪ್ಪ, ಉಪಾಧ್ಯಕ್ಷ ಎಸ್.ಎನ್.ಈಶ್ವರಪ್ಪ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಮತ್ತು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
31/01/2021 11:59 am