ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವೈನ್ ಮರ್ಚಂಟ್ಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಉಡುಪಿ: ಮದ್ಯ ಮಾರಾಟಗಾರರ ವಿವಿಧ ಬೇಡಿಕೆ ಈಡೇರಿಕೆ ಮತ್ತು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ನೇತೃತ್ವದಲ್ಲಿ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಯಿತು.

ಹೊರ ರಾಜ್ಯಗಳಿಂದ ನಕಲಿ ಮದ್ಯ ಸರಬರಾಜು ಆಗುತ್ತಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ ಮತ್ತು ಸನ್ನದುದಾರರಿಗೆ ತುಂಬಾ ನಷ್ಟ ಉಂಟಾಗುತ್ತಿದೆ ಎಂದು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ ಬಿ.ಗೋವಿಂದರಾಜ್ ಹೆಗ್ಡೆ ಆರೋಪಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಬೀಡಾ ಅಂಗಡಿ, ಮಾಂಸಾಹಾರಿ ಹೊಟೇಲ್, ದಿನಸಿ ಅಂಗಡಿ, ಡಾಬಾಗಳಲ್ಲಿನ ನಕಲಿ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಪ್ರತಿ ಜಿಲ್ಲೆಯಲ್ಲಿ ಈ ಬಗ್ಗೆ ಮತ್ತು ಗಾಂಜಾ ಸಹಿತ ಇತರ ಡ್ರಗ್ಸ್ ಕುರಿತು ವಿಶೇಷ ತಂಡವನ್ನು ರಚಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಆನ್‌ಲೈನ್ ಮೂಲಕ ಮದ್ಯ ಮಾರಾಟ ಮಾಡುವ ಪ್ರಸ್ತಾವವನ್ನು ಕೈಬಿಡಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಸಿ.ಎಲ್-6ಎ ಮತ್ತು 7 ಸನ್ನದುಗಳನ್ನು ಪ್ರಾರಂಭಿಸಲು ನೀಡಿರುವ ಆದೇಶವನ್ನು ರದ್ದುಗೊಳಿಸಿ, 2018ರ ನಂತರ ನೀಡಿರುವ ಸಿ.ಎಲ್-7 ಸನ್ನದುಗಳನ್ನು ಮರು ತನಿಖೆ ಮಾಡಲು ಸಮಿತಿ ರಚಿಸಬೇಕು. ಈ ಸಮಿತಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಿಗೆ ಸದಸ್ಯತ್ವ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಫೆಡರೇಶನ್ ರಾಜ್ಯ ಸಮಿತಿ ಸದಸ್ಯ ಮನೋಹರ್ ಶೆಟ್ಟಿ, ಉಡುಪಿ ತಾಲೂಕು ಅಧ್ಯಕ್ಷ ಮಿಥುನ್ ಆರ್. ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಜನಾರ್ದನ ಪೂಜಾರಿ, ಕಾರ್ಕಳ ತಾಲೂಕು ಅಧ್ಯಕ್ಷ ಶೋದರ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

02/02/2021 08:32 pm

Cinque Terre

9.77 K

Cinque Terre

1

ಸಂಬಂಧಿತ ಸುದ್ದಿ