ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಗ್ರಾಪಂ ಚುನಾವಣೆಯಲ್ಲಿ ಎಸ್ ಡಿಪಿಐ ಗೆಲುವು ಸಾಧಿಸಲು ಸಹಕರಿಸಿದ ಮತದಾರರಿಗೆ ಜ.8ರಂದು ಅಭಿನಂದನಾ ಸಮಾರಂಭ

ಮಂಗಳೂರು: ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ತಲಪಾಡಿ ಗ್ರಾಮ ಪಂಚಾಯತ್ ನ 10 ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಲು ಮತಚಲಾಯಿಸಿರುವ ಮತದಾರರಿಗೆ ಅಭಿನಂದನೆ ಹಾಗೂ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಎಸ್ ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಈ ಅಭಿನಂದನಾ ಸಮಾರಂಭವು ನಗರದ ತಲಪಾಡಿ ಕೆ.ಸಿ.ನಗರದ ಮರ್ಹೂಮ್ ಕೆ.ಎಂ.ಶರೀಫ್ ವೇದಿಕೆಯಲ್ಲಿ ಜ.8ರಂದು ಸಂಜೆ 7ಕ್ಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ಸಮಾರಂಭದಲ್ಲಿ ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮೈಸೂರು, ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಯರಾದ ಇಲ್ಯಾಸ್ ಮಹಮ್ಮದ್ ತುಂಬೆ, ಅಲ್ಫೊನ್ಸೊ ಫ್ರಾಂಕೊ, ಎಸ್ ಡಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರು ರಿಯಾಝ್ ಫರಂಗಿಪೇಟೆ, ಎಸ್ ಡಿಪಿಐ ಕಾರ್ಯದರ್ಶಿ ತುಳಸೀಧರನ್ ಸೇರಿದಂತೆ ಹಲವಾರು ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ‌ ಎಂದು ಅಶ್ರಫ್ ಮಂಚಿ ತಿಳಿಸಿದರು.

Edited By : Manjunath H D
Kshetra Samachara

Kshetra Samachara

06/02/2021 12:02 pm

Cinque Terre

18.85 K

Cinque Terre

2

ಸಂಬಂಧಿತ ಸುದ್ದಿ