ಉಡುಪಿ: ಕನ್ನಡ ನಾಡಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯ ಮಾಡುವ ಕೆಲಸವನ್ನು ರಾಜ್ಯ ಸರಕಾರವೇ ಮಾಡುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಿನ್ನೆ ಮುಗಿದ ಏರ್ ಶೋನಲ್ಲೂ ಕೂಡ ಕನ್ನಡದ ಬಗ್ಗೆ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಹಿಂದಿ ಹೇರಿಕೆ ವಿರುದ್ಧ ನಾವು ಹೋರಾಟ ಮಾಡಿದರೆ ನಮ್ಮನ್ನು ದೇಶದ್ರೋಹಿಗಳು ಎಂದು ಬಿಂಬಿಸಲಾಗುತ್ತದೆ. ಇಡೀ ದೇಶದಲ್ಲಿ ಹಿಂದುತ್ವದ ಹೆಸರಿನಲ್ಲಿ ಹೋರಾಟ ಮಾಡುವವರನ್ನೂ ದೇಶದ್ರೋಹಿಗಳು ಎಂದು ಬ್ರಾಂಡ್ ಮಾಡಲಾಗುತ್ತಿದೆ. ಕನ್ನಡ ನೆಲ ಭಾಷೆ ಜಲ ಈ ವಿಷಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಯಾವುದೇ ರಾಜಿ ಮಾಡದೇ ಹೋರಾಟ ಮಾಡುತ್ತದೆ ಎಂದರು.
ಕನ್ನಡವನ್ನು ನಿರ್ಲಕ್ಷಿಸುತ್ತಿರುವ ರಾಜ್ಯ ಸರಕಾರಕ್ಕೆ ಜನರೇ ಸೂಕ್ತ ಬುದ್ಧಿ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಕನ್ನಡ ಭಾಷೆ ನೆಲ-ಜಲದ ಬಗ್ಗೆ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಹೋರಾಟದ ರೂಪುರೇಷೆ ಹಮ್ಮಿಕೊಳ್ಳಲಾಗುವುದು ಎಂದರು.
Kshetra Samachara
06/02/2021 04:11 pm