ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ: ಚತುಷ್ಪಥ ರಸ್ತೆ ಉದ್ಘಾಟಿಸಿದ ಡಿಸಿಎಂ ಗೋವಿಂದ ಕಾರಜೋಳ

ಧರ್ಮಸ್ಥಳ: ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು, ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ತದನಂತರ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ

ಚತುಷ್ಪಥ ರಸ್ತೆಯನ್ನು ಸಚಿವ ಕಾರಜೋಳ ಉದ್ಘಾಟಿಸಿದರು.

ಲೋಕೋಪಯೋಗಿ ಇಲಾಖೆಯಿಂದ ಸುಮಾರು 15 ಕೋಟಿ ರೂ. ಮೊತ್ತದಲ್ಲಿ 2 ಕಿ.ಮೀ. ಚತುಷ್ಪಥ ರಸ್ತೆ ನಿರ್ಮಾಣಗೊಂಡಿದೆ. ಧರ್ಮಸ್ಥಳ ಸ್ನಾನಘಟ್ಟ ಸಮೀಪದಿಂದ ಶ್ರೀ ಕ್ಷೇ.ಧ.ಪ್ರೌಢ ಶಾಲೆವರೆಗೆ ಚತುಷ್ಪಥ ರಸ್ತೆ ನಿರ್ಮಿಸಲಾಗಿದೆ. 7.50 ರಂತೆ ಎರಡು ಬದಿ ಒಟ್ಟು 15 ಮೀಟರ್ ಅಗಲವಾದ ರಸ್ತೆ ಮಧ್ಯೆ 2.50 ಮೀಟರ್ ಗಾರ್ಡನಿಂಗ್ ಗಾಗಿ ಮೀಡಿಯನ್ ಡಿವೈಡರ್ ನಿರ್ಮಿಸಲಾಗಿದೆ.

Edited By : Manjunath H D
Kshetra Samachara

Kshetra Samachara

07/02/2021 03:59 pm

Cinque Terre

15.27 K

Cinque Terre

1

ಸಂಬಂಧಿತ ಸುದ್ದಿ