ಮೂಡುಬಿದಿರೆ: ತೆಂಕಮಿಜಾರು, ಪಾಲಡ್ಕ, ಬೆಳುವಾಯಿ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಸೋಮವಾರ ಆಯ್ಕೆಯಾಗಿದ್ದು, ಅವರನ್ನು ಬಿಜೆಪಿ ಮೂಡುಬಿದಿರೆ ಮಂಡಲ ವತಿಯಿಂದ ವಿದ್ಯಾಗಿರಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಅಭಿನಂದಿಸಲಾಯಿತು.
ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿರುವ ತೆಂಕಮಿಜಾರು ಗ್ರಾ.ಪಂನ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ-ಸಮಿತಾ ಶೆಟ್ಟಿ, ಪಾಲಡ್ಕ ಗ್ರಾ.ಪಂನ ಅಧ್ಯಕ್ಷ -ದಿನೇಶ್ ಕಾಂಗ್ಲಾಯಿ, ಉಪಾಧ್ಯಕ್ಷ ಸುಕೇಶ್ ಶೆಟ್ಟಿ, ಬೆಳುವಾಯಿ ಗ್ರಾ.ಪಂ ಅಧ್ಯಕ್ಷೆ ಸುಶೀಲಾ, ಉಪಾಧ್ಯಕ್ಷ ರವೀಂದ್ರ ಪೂಜಾರಿ ಅವರನ್ನು ಶಾಸಕ ಉಮಾನಾಥ ಕೋಟ್ಯಾನ್ ಅಭಿನಂದಿಸಿದರು.
ನಂತರ ಮಾತನಾಡಿದ ಅವರು, ಹುದ್ದೆ ಎಂಬುದು ಜವಾಬ್ದಾರಿ. ಅಧ್ಯಕ್ಷ- ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವವರು ಪಕ್ಷ ಬೇಧ ಮರೆತು ತಮ್ಮ ಊರಿನ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಮತ್ತು ಪಕ್ಷದ ಹಿರಿಯರ, ಅನುಭವಸ್ಥರ ಸಲಹೆ ಮಾರ್ಗದರ್ಶನದೊಂದಿಗೆ ಮುಂದುವರೆಯಬೇಕು ಎಂದರು.
ಪಂಚಾಯಿತಿ ಚುನಾವಣೆಯ ಉಸ್ತುವಾರಿಯಾಗಿದ್ದ ನಾಗರಾಜ ಪೂಜಾರಿ, ದಿನೇಶ್ ಪೂಜಾರಿ ಅವರನ್ನು ಗೌರವಿಸಲಾಯಿತು.
ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ತಾಪಂ ಉಪಾಧ್ಯಕ್ಷ ಸಂತೋಷ್, ಬಿಜೆಪಿ ಮಂಡಲ ಉಪಾಧ್ಯಕ್ಷ ಅಜಯ್ ರೈ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರಾ, ಪುತ್ತಿಗೆ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಉಪಸ್ಥಿತರಿದ್ದರು.
Kshetra Samachara
08/02/2021 07:15 pm