ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಕೋಟಿ- ಚೆನ್ನಯರ ಗರಡಿಯಲ್ಲಿ ಜಗದೀಶ್ ಅಧಿಕಾರಿ ಕ್ಷಮೆಯಾಚನೆ, ತಪ್ಪು ಕಾಣಿಕೆ ಅರ್ಪಣೆ

ಮೂಡುಬಿದಿರೆ: ಕೋಟಿ- ಚೆನ್ನಯರ ಬಗ್ಗೆ ತನ್ನ ಹೇಳಿಕೆ ಮೂಲಕ ವಿವಾದಕ್ಕೆ ಈಡಾಗಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಕ್ಷಮೆಯಾಚನೆ ಮಾಡಿದ್ದಾರೆ.

ಇಂದು ಮೂಡುಬಿದಿರೆ ಸಮೀಪದ ಕೆಲ್ಲಪುತ್ತಿಗೆಯ ಪುರಾತನ ಶ್ರೀ ಕ್ಷೇತ್ರ ಭೂತರಾಜಗುಡ್ಡೆಯ ಶ್ರೀ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ ತಪ್ಪು ಕಾಣಿಕೆ ಸಲ್ಲಿಸಿ, ದೈವ- ದೇವರ ಮುಂದೆ ಕ್ಷಮೆಯಾಚಿಸಿದರು.

'ತನ್ನ ಹೇಳಿಕೆಯಿಂದಾಗಿ ಬಿಲ್ಲವ ಸಮುದಾಯಕ್ಕೆ ನೋವಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಕೂಡ ಇದರಿಂದ ನೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ತಾನು ಕ್ಷಮೆಯಾಚನೆ ಮಾಡುತ್ತಿದ್ದೇನೆ. ತನ್ನ ಮಾತಿನಿಂದ ಉಂಟಾದ ವಿವಾದಕ್ಕೆ ಕೋಟಿ-ಚೆನ್ನಯರ ಗರಡಿಗೇ ಬಂದು ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸುವ ಮೂಲಕ ಎಲ್ಲ ವಿವಾದಗಳಿಗೆ ತಾನು ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ. ಇನ್ನು ಸದ್ಯದಲ್ಲೇ ಹಿರಿಯ ರಾಜಕೀಯ ಮುತ್ಸದ್ಧಿ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರಲ್ಲೂ ಕ್ಷಮೆಯಾಚಿಸುತ್ತೇನೆ ಜೊತೆಗೆ ಕುದ್ರೋಳಿ ಹಾಗೂ ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚನೆ ಮಾಡುತ್ತೇನೆ' ಎಂದಿದ್ದಾರೆ ಜಗದೀಶ್ ಅಧಿಕಾರಿ.

Edited By : Manjunath H D
Kshetra Samachara

Kshetra Samachara

09/02/2021 07:29 pm

Cinque Terre

25.05 K

Cinque Terre

11

ಸಂಬಂಧಿತ ಸುದ್ದಿ