ಮೂಡುಬಿದಿರೆ: ಬಹುತೇಕ ಕೃಷಿ ಕೆಲಸವನ್ನೇ ಅವಲಂಬಿಸಿರುವ ಕುಡುಬಿ ಸಮುದಾಯವನ್ನು ಎಸ್.ಟಿ. ಗೆ ಸೇರಿಸಬೇಕೆಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಕೃಷಿಯನ್ನು ಅವಲಂಬಿಸಿರುವ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕುಡುಬಿ ಸಮುದಾಯವನ್ನು ಎಸ್.ಟಿ. ಪಂಗಡಕ್ಕೆ ಸೇರಿಸಬೇಕೆಂದು 1972ರಲ್ಲಿ ಸಂಸದರಾಗಿದ್ದ ಡಾ.ಟಿ.ಎ.ಪೈ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅಂದಿನಿಂದ ಇಂದಿನವರೆಗೂ ಹೋರಾಟ ನಡೆಯುತ್ತಿದ್ದರೂ ಬೇಡಿಕೆ ಈಡೇರಿಲ್ಲ. ಯಡಿಯೂರಪ್ಪ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ಬೇಡಿಕೆ ಈಡೇರಿಸುವಂತೆ ಸದನದಲ್ಲಿ ಧರಣಿ ಕುಳಿತಿದ್ದೆ. ಆದರೂ ಪ್ರಯೋಜನವಾಗಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಆದೇಶಿಸಿದ್ದರು. ಕುಲಶಾಸ್ತ್ರೀಯ ಅಧ್ಯಯನ ವರದಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಕೆಯಾಗಿದ್ದು, ಆಯೋಗ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕುಡುಬಿ ಸಮುದಾಯದ ರಾಜ್ಯ ಸಮಿತಿ ಸದಸ್ಯ ಪುತ್ತುಗೌಡ ಮಾತನಾಡಿ, ನಮ್ಮ ಬೇಡಿಕೆ ಈಡೇರಿಸುವಂತೆ ಸಂಸದರು- ಶಾಸಕರಲ್ಲಿ ಬೇಡಿಕೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದರು. ಮೂಡುಬಿದಿರೆ ತಾಲೂಕು ಪಂಚಾಯಿತಿ ಸದಸ್ಯ ಪ್ರಕಾಶ್ ಗೌಡ ಉಪಸ್ಥಿತರಿದ್ದರು.
Kshetra Samachara
11/02/2021 07:54 pm