ಮಂಗಳೂರು: ರಾಜ್ಯದಲ್ಲಿರುವ ಮದ್ರಸ ಶಿಕ್ಷಣದ ಉನ್ನತೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಕೈಮಗ್ಗ- ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ್ ಹೇಳಿದ್ದಾರೆ.
ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ತಾಲೂಕಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಾಗಿದೆ ಎಂದರು.
ಹತ್ತು ಕೋಟಿಯ ಎರಡು ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಇದೀಗ ನಲ್ವತ್ತು ಕೋಟಿಯ ನಾಲ್ಕು ಕಟ್ಟಡ ಗಳಿಗೆ ಶಂಕುಸ್ಥಾಪನೆ ಮಾಡಿದ್ದೇವೆ. ನಮ್ಮ ಇಲಾಖೆಗಳಿಂದ ಉತ್ತಮ ಶಿಕ್ಷಣ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ.
ಧಾರವಾಡದಲ್ಲಿ ಉತ್ತಮ ಶಿಕ್ಷಣ ಪಡೆದು ನೂರಕ್ಕೆ ನೂರು ಫಲಿತಾಂಶ ಪಡೆಯುತ್ತಿದ್ದಾರೆ. ನಮ್ಮ ಇಲಾಖೆಯ ಶಿಕ್ಷಣ ಅತ್ಯುತ್ತಮವಾಗಿದೆ. ಕೊರೊನಾ ಸಂದರ್ಭ ನನೆಗುದಿಗೆ ಬಿದ್ದಿದ್ದ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಶೀಘ್ರ ಕ್ರಮ ವಹಿಸಲಾಗುವುದು. ವಿದ್ಯಾರ್ಥಿ ಗಳಿಗೆ ತಕ್ಷಣ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದರು.
Kshetra Samachara
12/02/2021 01:33 pm