ಉಡುಪಿ: ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ,ಅದೊಂದು ನೊಂದಣಿಯಾಗಿರುವ ಸಂಸ್ಥೆ.ನೊಂದವಣೆಗೆ ಅದರದ್ದೆ ಆದ ನೀತಿ ನಿಯಮಾವಳಿಗಳು ಇವೆ,ದೇಣಿಗೆ ಸಂಗ್ರಹ ಮಾಡಲು ಅದರದ್ದೇ ಆದ ಕಾನೂನು ಇದೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು,ನಮಗೆ ಸಂವಿಧಾನವೇ ಅಧಿಕಾರ ಕೊಟ್ಟಿದೆ,ಪಾರರ್ದಶಕತೆ ಖಂಡಿತವಾಗಿ ಬೇಕೆ ಬೇಕು.
ಸಂಶಯಗಳನ್ನು ಮುಂದೆ ಇಟ್ಟರೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು.ಇಲ್ಲಿ ಮುಚ್ಚು ಮರೆಯ ಯಾವುದೇ ವಿಷಯಗಳು ನಡೆಯುದಿಲ್ಲ .ಆಡಿಟ್ ಆಗಿ ಅದಕ್ಕೆ ಬೇಕಾಗಿರುವಂತಹ ಪುರಾವೆಗಳನ್ನು ಕೊಡಲು ಸಾಧ್ಯವಿದೆ.
ಹಾಗಾಗಿ ಯಾವುದೆ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ.ರಾಮ ಜನ್ಮಭೂಮಿ ಟ್ರಸ್ಟ್ ನಂತೆ ಅಧಿಕೃತವಾಗಿರುವ ವಿಶ್ವ ಪರಿಷತ್ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ.ವಿಶ್ವ ಹಿಂದೂ ಪರಿಷತ್ ನ ಕಾರ್ಯರ್ತರಿಗೆ ದೇಣಿಗೆ ಸಂಗ್ರಹ ದ ಜವಾಬ್ದಾರಿ ನೀಡಲಾಗಿದೆ.ವಿಹಿಂಪ ನ ಮುಖ್ಯಸ್ಥ ಆಯಾ ಊರಿನಲ್ಲಿ ಸಂಗ್ರಹ ನಿರತರಾಗಿದ್ದಾರೆ.ಹಿರಿಯ, ಮುಂದಾಳುಗಳ ನೇತೃತ್ವದಲ್ಲಿ ಕಾರ್ಯಕರ್ತರು ನಿಧಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Kshetra Samachara
17/02/2021 04:05 pm