ಮುಲ್ಕಿ: ಮುಲ್ಕಿ ಹೋಬಳಿಯ ಪ್ರತಿಷ್ಠಿತ ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಲೀಲಾ ಕೃಷ್ಣಪ್ಪ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸುರೇಶ್ ಪಂಜ ಆಯ್ಕೆಯಾಗಿದ್ದಾರೆ. ಬುಧವಾರ ಕೆಮ್ರಾಲ್ ಪಂಚಾಯಿತಿ ಸಭಾಭವನದಲ್ಲಿ ನಡೆದ ಆಂತರಿಕ ಆಯ್ಕೆಯಲ್ಲಿ ಸಾಮಾನ್ಯ ಮಹಿಳಾ ಮೀಸಲಾತಿ ನಿಯಮದ ಅನ್ವಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲೀಲಾ ಕೃಷ್ಣಪ್ಪ ಪೂಜಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ ಶೆಟ್ಟಿಯವರನ್ನು10- 7 ಮತಗಳ ಅಂತರದಿಂದ ಸೋಲಿಸಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಹುದ್ದೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪಂಜ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹರಿಪ್ರಸಾದ ಶೆಟ್ಟಿಯವರನ್ನು 10 -7 ಮತಗಳ ಅಂತರದಿಂದ ಸೋಲಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಳಿಕ ಕಾಂಗ್ರೆಸ್ ಬೆಂಬಲಿತ ನ ಅಭ್ಯರ್ಥಿಗಳು, ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ಸಂದರ್ಭ ಮಾಜೀ ಸಚಿವ ಅಭಯಚಂದ್ರ ಜೈನ್ , ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್,ಮಯ್ಯದ್ದಿ ಪಕ್ಷಿಕೆರೆ,ಮುಲ್ಕಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.
ನೂತನ ಉಪಾಧ್ಯಕ್ಷ ಸುರೇಶ್ ಪಂಜ ಮಾತನಾಡಿ ತಮ್ಮ ಆಡಳಿತ ಅವಧಿಯಲ್ಲಿಪಂಚಾಯಿತಿ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವುದರ ಮೂಲಕ ಅಭಿವೃದ್ಧಿಗೆ ಎಲ್ಲರ ಸಹಕಾರವನ್ನು ವಿನಂತಿಸಿದರು. ಈ ಸಂದರ್ಭ ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮುಲ್ಕಿ ನ.ಪಂ. ಸದಸ್ಯ ಪುತ್ತುಬಾವ,ಕಿಲ್ಪಾಡಿ ಗ್ರಾ. ಪಂ. ಉಪಾಧ್ಯಕ್ಷ ಗೋಪಿನಾಥ ಪಡ0ಗ ಮತ್ತಿತರರು ಉಪಸ್ಥಿತರಿದ್ದರು ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಒಟ್ಟು 17 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 10 ಸ್ಥಾನಗಳಲ್ಲಿ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 7 ಸ್ಥಾನಗಳಲ್ಲಿ ಜಯ ಗಳಿಸಿದ್ದರು.
Kshetra Samachara
17/02/2021 04:16 pm