ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ವಲಯ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಣಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಅಭಿನಂದಿಸುವ ಕಾರ್ಯಕ್ರಮ ನಡೆಯಿತು.
ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಮತ್ತು ಉಪಾಧ್ಯಕ್ಷರಾದ ಪ್ರೀತಿ ಡಿನ್ನಾ ಪೇರೆರಾ ಅವರಿಗೆ ಮಾಜಿ ಸಚಿವರು ಶಾಲು ಹೊದಿಸಿ ಅಭಿನಂದಿಸಿದರು ಹಾಗೂ ಈ ಸಂದರ್ಭ ಹೊಸದಾಗಿ ಸೇರ್ಪಡೆಯಾದ ಶರತ್ ಪೂಜಾರಿ ಯವರಿಗೆ ಪಕ್ಷದ ಧ್ವಜ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡಿಸಿದರು. ಈ ಸಂದರ್ಭ ಮಾತನಾಡಿದ ರೈ, ಪಕ್ಷಕ್ಕೆ ನಿಷ್ಠೆಯಿಂದ ಪ್ರಾಮಾಣಿಕವಾಗಿ ದುಡಿದರೆ ಯಶಸ್ಸು ದೊರಕುವುದು ನಿಶ್ಚಿತ ಎಂಬುದಕ್ಕೆ ಮಾಣಿಯ ಕಾರ್ಯಕರ್ತರೇ ಸಾಕ್ಷಿ. ಮುಂಬರುವ ಜಿಪಂ ತಾಪಂ ಚುನಾವಣೆಯಲ್ಲೂ ಒಗ್ಗಟ್ಟಿನಿಂದ ದುಡಿದು ಪಕ್ಷವನ್ನು ಗೆಲ್ಲಿಸುವಂತೆ ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್ ಬಡಕಬೈಲು,ಮಾಣಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
17/02/2021 05:36 pm