ಉಡುಪಿ: ಉಡುಪಿ ಭಜನಾ ಸಪ್ತಾಹ ಉದ್ಘಾಟನೆಗೆ ಆಗಮಿಸಿದ್ದ ಕಾಶಿ ಮಠಾಧೀಶರಾದ ಸಂಯಮಿಂದ್ರ ತೀರ್ಥ ಶ್ರೀಪಾದರನ್ನು ಉಡುಪಿ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರೊಂದಿಗೆ ಶಾಸಕ ಕೆ.ರಘುಪತಿ ಭಟ್ ಅವರು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ವೇಳೆ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಶ್ರೀರಾಮ ಮಂದಿರದ ನಿಧಿ ಸಮರ್ಪಣೆಯ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಪಿ.ವಿ. ಶೆಣೈ ಉಪಸ್ಥಿತರಿದ್ದರು.
Kshetra Samachara
18/02/2021 08:58 am