ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರಗಳು ತಂದಿರುವ ರೈತ ವಿರೋಧಿ ನೀತಿಗಳಾದ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ,ವಿದ್ಯುತ್ ಕಾಯ್ದೆ ತಿದ್ದುಪಡಿ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮರ ಸಾರಿದೆ.
ಫೆ. 22ರಿಂದ 27ರ ವರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯು ಹೆಜಮಾಡಿ ಟೋಲ್ ಗೇಟಿನಿಂದ ಪ್ರಾರಂಭಗೊಂಡು ಕಾಪು ಕಟಪಾಡಿ ಉಡುಪಿ ಕಲ್ಯಾಣಪುರ ಸಂತೆಕಟ್ಟೆ ಬ್ರಹ್ಮಾವರ ಕುಂದಾಪುರ ಅರೆಹೊಳೆ ಮೂಲಕ ಬೈಂದೂರಿನಲ್ಲಿ ಸಮಾಪನಗೊಳ್ಳಲಿದೆ. ಒಟ್ಟು 108 ಕಿಲೋಮೀಟರ್ ಪಾದಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸುವುದರೊಂದಿಗೆ ಪಾದಯಾತ್ರೆ ಸಮಾಪನಗೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
Kshetra Samachara
19/02/2021 02:28 pm