ಮಂಗಳೂರು: ಪಿಎಫ್ ಐ ಸಂಸ್ಥಾಪನಾ ದಿನದ ಅಂಗವಾಗಿ ಮಂಗಳೂರಿನ ಉಳ್ಳಾಲದಲ್ಲಿ ಪಿಎಫ್‌ಐ ಕಾರ್ಯಕರ್ತರು ನಡೆಸಿದ್ದ ಯುನಿಟಿ ಮಾರ್ಚ್‌ನಲ್ಲಿ ಕೋಮು ಭಾವನೆ ಕೆರಳಿಸುವ ಹುನ್ನಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂಬ ಆರೋಪದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.
ಫೆ. 17 ರಂದು ನಡೆದಿದ್ದ ಕಾರ್ಯಕ್ರಮದ ದಿನ 400ಕ್ಕೂ ಅಧಿಕ ಸಮವಸ್ತ್ರಧಾರಿ ತಂಡ ಪೊಲೀಸರ ಸೂಚನೆ ಪಾಲಿಸದೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಾರ್ವಜನಿಕರಿಗೂ ತೊಂದರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಮಾರ್ಚ್ ವೇಳೆ ಆರ್‌ಎಸ್‌ಎಸ್ ಹಾಗೂ ಬಾಬರಿ ಮಸೀದಿ ತೀರ್ಪಿನ ವಿರುದ್ಧ ಘೋಷಣೆ, ಪರವಾನಿಗೆ ಇಲ್ಲದೇ ಮೆರವಣಿಗೆ ನಡೆಸಿ ಅಶಾಂತಿಯ ವಾತಾವರಣ ಸೃಷ್ಟಿಸಲು ಪ್ರಯತ್ನ ಮಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಕಾರ್ಪೊರೇಟರ್ ಮುನೀಬ್ ಬೆಂಗ್ರೆ, ಅಬ್ದುಲ್ ಖಾದರ್ ಕುಳಾಯಿ, ಶಾಹಿದ್ ದೇರಳಕಟ್ಟೆ, ಸಫ್ವಾನ್, ಇಮ್ತಿಯಾಝ್ ಕೋಟೆಪುರ, ಖಲೀಲ್ ಕಡಪ್ಪುರ, ರಮೀಝ್ ಕೋಡಿ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Kshetra Samachara
19/02/2021 11:03 pm