ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗೃಹ ಸಚಿವರಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ

ಕಾರ್ಕಳ: ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕಾರ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಶಾಸಕ ಸುನಿಲ್ ಕುಮಾರ್ ಜತೆ ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಕಾರ್ಕಳದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾದರು.

ಈ ಸಂದರ್ಭ ಡಾ.ಅಂಬೇಡ್ಕರ್ ಭವನ ನಿರ್ಮಾಣಕ್ಕೆ 75 ಲಕ್ಷ ರೂ. ಮೊತ್ತದ ಮೊದಲ ಕಂತಿನ ಹಣ ಬಿಡುಗಡೆ ಆದೇಶ ಪ್ರತಿಯನ್ನು ಸಚಿವ ಬೊಮ್ಮಾಯಿ ಹಸ್ತಾಂತರಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಕಾರ್ಕಳ ಸಮಿತಿಗೆ ಸರ್ಕಾರದ ಆದೇಶವನ್ನು ಸಚಿವ ಬೊಮ್ಮಾಯಿ ನೀಡಿದರು.

Edited By : Manjunath H D
Kshetra Samachara

Kshetra Samachara

20/02/2021 09:37 pm

Cinque Terre

6.82 K

Cinque Terre

0

ಸಂಬಂಧಿತ ಸುದ್ದಿ