ಮಂಗಳೂರು: ಸುರತ್ಕಲ್ ಟೋಲ್ ಗೇಟ್ ನಲ್ಲಿ ಫೆ.15ರಿಂದ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸುವ ಸಂಬಂಧ ಹೋರಾಟ ಸಮಿತಿಯಿಂದ ಟೋಲ್ ಗೇಟ್ ಗೆ ವಿರೋಧ ವ್ಯಕ್ತವಾಯಿತು.
ಈ ವೇಳೆ ಮಾತನಾಡಿದ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, 6 ವರ್ಷಗಳ ಹಿಂದೆ
ತಾತ್ಕಾಲಿಕ ನೆಲೆಯಲ್ಲಿ ಸ್ಥಾಪಿಸಲಾಗಿದ್ದ ಟೋಲ್ ಗೇಟ್ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಗೊಳಿಸುವುದಾಗಿ ತಿಳಿಸಲಾಗಿತ್ತು. ಆದರೆ, ಬಳಿಕದ 3 ತಿಂಗಳು, 6 ತಿಂಗಳು ಎಂದು ಮುಂದುವರಿಸಿ ಈಗ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ
ಸ್ಥಳೀಯರನ್ನೂ ಸುಳಿಯುವ ಹುನ್ನಾರ ನಡೆಯುತ್ತಿದೆ ಎಂದು ಅಭಿಪ್ರಾಯಿಸಿದರು.
ತಾತ್ಕಾಲಿಕವಾಗಿ ಸ್ಥಾಪಿಸಲಾಗಿದ್ದ ಟೋಲ್ ಗೇಟ್ ಮುಚ್ಚುವ ವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
Kshetra Samachara
21/02/2021 04:04 pm