ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಯೋಧ್ಯೆಯಲ್ಲಿ 'ಕರ್ನಾಟಕ ಯಾತ್ರಿ ನಿವಾಸ' ನಿರ್ಮಾಣಕ್ಕೆ ಭೂಮಿ ಒದಗಿಸಲು ಯೋಗಿಗೆ ಕೋಟ ಮನವಿ

ಮಂಗಳೂರು: ಕೇರಳದ ಕಾಸರಗೋಡಿಗೆ ಬಿಜೆಪಿ ಸಮಾವೇಶ ಉದ್ಘಾಟನೆಗಾಗಿ ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು, ಉತ್ತರಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಭವಿಷ್ಯದಲ್ಲಿ ಭೇಟಿ ನೀಡುವ ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿ ನಿವಾಸ ಒಂದನ್ನು ನಿರ್ಮಾಣ ಮಾಡಲು ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಲ್ಲಿಸಿದ ಮನವಿಯನ್ನು ಪುರಸ್ಕರಿಸುವಂತೆ ವಿನಂತಿಸಿದರು.

ಉತ್ತರ ಪ್ರದೇಶದ ಸರಕಾರ ಕರ್ನಾಟಕದ ಯಾತ್ರಿ ನಿವಾಸಕ್ಕಾಗಿ ಶೀಘ್ರ ಭೂಮಿ ಮಂಜೂರು ಮಾಡಿದರೆ ಯಾತ್ರಿ ನಿವಾಸ ನಿರ್ಮಾಣಕ್ಕೆ ಅನುಕೂಲ ಆಗುವುದಾಗಿ ಸಚಿವ ಕೋಟ ಅವರು ಯೋಗಿ ಆದಿತ್ಯನಾಥ್ ಅವರಲ್ಲಿ ಮನವಿ ಮಾಡಿದರು.

ಸಚಿವರ ಮನವಿಗೆ ಪ್ರತಿಕ್ರಿಯಿಸಿದ ಯೋಗಿ ಆದಿತ್ಯನಾಥರು, ಕೂಡಲೇ 'ಕರ್ನಾಟಕ ಯಾತ್ರಿ ನಿವಾಸ' ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಕರ್ನಾಟಕದಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.

Edited By : Vijay Kumar
Kshetra Samachara

Kshetra Samachara

21/02/2021 10:24 pm

Cinque Terre

14 K

Cinque Terre

2

ಸಂಬಂಧಿತ ಸುದ್ದಿ