ಮುಲ್ಕಿ:ಪಕ್ಷಿಕೆರೆ ಸಮೀಪದ ಕೆಮ್ರಾಲ್ ಗ್ರಾಮ ಪಂಚಾಯಿತಿಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತರಾದ ಲೀಲಾ ಕೃಷ್ಣಪ್ಪ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ದೇವಾಡಿಗ ಪಂಜ ಮತ್ತು ಕಾಂಗ್ರೆಸ್ ಬೆಂಬಲಿತರ ವಿಜಯೋತ್ಸವ ಪಕ್ಷಿಕೆರೆ ಸುರಗಿರಿ ದೇವಸ್ಥಾನದ ಬಳಿಯಿಂದ ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಿತು.
ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಮಾತನಾಡಿ ಕಳೆದ ಬಾರಿ ಕೆಮ್ರಾಲ್ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ನಡೆಸಿದ ಬಿಜೆಪಿ ಬೆಂಬಲಿತರ ಭ್ರಷ್ಟಾಚಾರದಿಂದ ಜನ ಬೇಸತ್ತು ಕಾಂಗ್ರೆಸ್ ಬೆಂಬಲಿತರಿಗೆ ಮಣೆ ಹಾಕಿದ್ದಾರೆ.
ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಆಡಳಿತ ನೀಡುವುದರೊಂದಿಗೆ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದೇ ನಮ್ಮ ಕರ್ತವ್ಯವಾಗಿದೆ ಎಂದರು. ಈ ಸಂದರ್ಭ ಕೆಪಿಸಿಸಿ ಕೋಆರ್ಡಿನೇಟರ್ ವಸಂತ ಬೆರ್ನಾಡ್, ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಮಯ್ಯದ್ದಿ ಪಕ್ಷಿಕೆರೆ, ಜಾಕ್ಸನ್ ಪಕ್ಷಿಕೆರೆ, ಕಾಂಗ್ರೆಸ್ ನಾಯಕರಾದ ಗುರುರಾಜ ಎಸ್ ಪೂಜಾರಿ, ಬಾಲಾದಿತ್ಯ ಆಳ್ವ, ಪ್ರವೀಣ್ ಪಕ್ಷಿಕೆರೆ, ಮುಲ್ಕಿ ನ. ಪಂ. ಸದಸ್ಯರಾದ ಪುತ್ತುಬಾವ, ಯೋಗೀಶ್ ಕೋಟ್ಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಮತ್ತಿತರರಿದ್ದರು.
Kshetra Samachara
21/02/2021 10:29 pm