ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಫೆ.22ರಂದು ಪರ್ಕಳಕ್ಕೆ ಸಿದ್ದರಾಮಯ್ಯ ಆಗಮನ

ಉಡುಪಿ: ಪರ್ಕಳದ ಸ್ವಾಗತ್ ಹೋಟೆಲ್ ಬಳಿ ಇರುವ ಕಾಂಗ್ರೆಸ್ ಕಚೇರಿಗೆ ಫೆಬ್ರವರಿ 22ರಂದು (ನಾಳೆ) ಮಧ್ಯಾಹ್ನ 1.30ರ ವೇಳೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತುರ್ತಾಗಿ ಭೇಟಿ ನೀಡಲಿದ್ದಾರೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಈ ಹಿಂದೆ ಅವರು ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೊದಲೇ ಮುಖ್ಯಮಂತ್ರಿ ಆಗುತ್ತಾರೆ ಎಂದು 108 ತೆಂಗಿನ ಕಾಯಿಗಳನ್ನು ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆಂಗಿನಕಾಯಿ ಒಡೆದು ಪ್ರಾರ್ಥಿಸಿದ್ದು, ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಕೆ ಭೇಟಿಯಾಗಿದೆ.

ಈ ಸಂದರ್ಭ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಜೊತೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇರುತ್ತಾರೆ ಎಂದು ಕಾರ್ಯಕ್ರಮ ಸಂಘಟಕ ಹಾಗೂ ಕಾಂಗ್ರೆಸ್ ಮುಖಂಡ ಮೋಹನದಾಸ್ ನಾಯಕ್ ಪರ್ಕಳ, ಗಣೇಶ್ ರಾಜ್ ಸರಳೇಬೆಟ್ಟು, ಜಯ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

21/02/2021 10:38 pm

Cinque Terre

20.26 K

Cinque Terre

16

ಸಂಬಂಧಿತ ಸುದ್ದಿ