ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಕೋವಿಡ್ ತಡೆಗಟ್ಟಲು ಸಚಿವರು ಕಾಸರಗೋಡು, ದ.ಕ. ಜಿಲ್ಲಾಡಳಿತದ ಸಭೆ ಕರೆಯಲಿ"

ಮಂಗಳೂರು: ಕೇರಳದಲ್ಲಿ ಕೋವಿಡ್ ಸೋಂಕಿತರ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ದ‌.ಕ. ಜಿಲ್ಲಾ ಉಸ್ತುವಾರಿ ಸಚಿವರು ಕಾಸರಗೋಡು ಹಾಗೂ ದ.ಕ. ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆಯ ಜಂಟಿ ಸಭೆಯನ್ನು ಕರೆದು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಲಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, ಲಸಿಕಾ ಅಭಿಯಾನದ ಬಗ್ಗೆ ಸರಕಾರ ಯಾವುದೇ ಮಾಹಿತಿ ನೀಡಿಲ್ಲ. ಆದರೆ ಹಿರಿಯ ನಾಗರಿಕರು, ಬಿಪಿ, ಶುಗರ್ ನಂತಹ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡುವ ಕಾರ್ಯವಾಗಲಿ ಎಂದರು.

ತಮ್ಮ ಸಹೋದರನ ಬಗ್ಗೆ ಐಟಿ ಇಲಾಖೆ ದಾಳಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ನನ್ನ ಸಹೋದರ ಬಹಳಷ್ಟು ವರ್ಷಗಳಿಂದ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳ ಸಂಪರ್ಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿಯವರು ಪರಿಶೀಲನೆ ನಡೆಸಿದ್ದಾರೆ. ಅವರು ಪ್ರಾಮಾಣಿಕವಾಗಿ ತಮ್ಮ ಕೆಲಸ ಮಾಡುತ್ತಿದ್ದು, ನಮ್ಮ ಸಹಕಾರ ನೀಡುತ್ತೇವೆ ಎಂದು ಯು.ಟಿ. ಖಾದರ್ ತಿಳಿಸಿದರು.

Edited By : Manjunath H D
Kshetra Samachara

Kshetra Samachara

22/02/2021 01:50 pm

Cinque Terre

15.44 K

Cinque Terre

0

ಸಂಬಂಧಿತ ಸುದ್ದಿ