ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಅಲ್ಪಸಂಖ್ಯಾತರ ಮೀಸಲಾತಿ ಕಡಿತಗೊಳಿಸಿದರೆ ಉಗ್ರ ಹೋರಾಟ"

ಮಂಗಳೂರು: ನಗರದ ಪುರಭವನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರ ಪದಗ್ರಹಣ ಹಾಗೂ ಭಾವೈಕ್ಯತಾ ಸಮಾವೇಶ ನಡೆಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಅದ್ಧೂರಿ ಸ್ವಾಗತ ಕೋರಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಬಿ.ಕೆ.ಹರಿಪ್ರಸಾದ್, ಯು.ಟಿ. ಖಾದರ್, ರಮಾನಾಥ ರೈ, ವಸಂತ ಬಂಗೇರ ಸಹಿತ ಹಲವು ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಉಪಸ್ಥಿತರಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ,

ಬಿಜೆಪಿ ಸರಕಾರದ ಆಡಳಿತ ನೋಡಿ ಜನರು ಭ್ರಮ ನಿರಸನಗೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ

ರಾಹುಲ್ ಗಾಂಧಿ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿದೆ.

ಮೋದಿ ಸರಕಾರ ಸುಳ್ಳು ಆಶ್ವಾಸನೆಯನ್ನೇ ಕೊಡುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದಿದ್ದು,

ಭ್ರಷ್ಟಾಚಾರದಲ್ಲೇ ತೊಡಗಿದೆ. ಈ ಸರಕಾರಗಳ ವಿರುದ್ಧ ಹೋರಾಟ ಅನಿವಾರ್ಯ.

ಅಲ್ಪಸಂಖ್ಯಾತರ ಮೀಸಲಾತಿ, ಮತ್ತಿತರ ಸೌಲಭ್ಯ ಕಡಿತಗೊಳಿಸಿದರೆ ಉಗ್ರ ಹೋರಾಟ ಮಾಡುತ್ತೇವೆ.

ಸರಕಾರದ ನಿರ್ಧಾರ ಯಾರೂ ಬೆಂಬಲಿಸಲ್ಲ ಎಂದರು.

Edited By : Nagesh Gaonkar
Kshetra Samachara

Kshetra Samachara

23/02/2021 08:07 am

Cinque Terre

20.87 K

Cinque Terre

2

ಸಂಬಂಧಿತ ಸುದ್ದಿ