ಉಡುಪಿ: ಉಡುಪಿ ಜಿಲ್ಲೆಯ ಸಾಲಿಗ್ರಾಮದ ಮೀನುಮಾರುಕಟ್ಟೆಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆ ನಿರ್ಮಿಸುವ ಉದ್ದೇಶದಿಂದ ಸಾಲಿಗ್ರಾಮ ಮೀನುಮಾರುಕಟ್ಟೆಯನ್ನು ಬೇರೆ ಭಾಗಕ್ಕೆ ಸ್ಥಳಾಂತರಿಸುವ ಸಲುವಾಗಿ ಕುಂದಾಪುರ ವಿಧಾನಸಭಾ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿನೀಡಿ ಸ್ಥಳ ಪರಿಶೀಲಿಸಿ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮೀನುಮಾರುಕಟ್ಟೆಯ ಮಹಿಳೆಯರು ತಮ್ಮ ಸಮಸ್ಯೆಯನ್ನು ಶಾಸಕರಲ್ಲಿ ತೋಡಿಕೊಂಡರು. ರಾಷ್ಟ್ರೀಯ ಹೆದ್ದಾರಿ ಚತುಷ್ಫತ ಕಾಮಗಾರಿಯಿಂದಾಗಿ ಮಾರುಕಟ್ಟೆ ಸ್ಥಳ ಹೆದ್ದಾರಿಗೆ ಹೋಗಿದೆ.ಇದರಿಂದ ಕಂಗೆಟ್ಟ ಮಹಿಳಾ ವ್ಯಾಪಾರಿಗಳ ಅಳಲನ್ನು ಆಲಿಸಿದ ಶಾಸಕರು, ಮೀನುಗಾರ ಮಹಿಳೆಯರ ಜೀವನೋಪಾಯಕ್ಕೆ ಪರ್ಯಾಯ ಮಾರುಕಟ್ಟೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು.
Kshetra Samachara
24/02/2021 12:33 pm