ಉಡುಪಿ:ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಹಾಗೂ ನಗರ ಬಿಜೆಪಿಯ ಎಲ್ಲಾ ಮೋರ್ಚಾಗಳ ಸಹಭಾಗಿತ್ವದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರ ಜನ್ಮದಿನದ ಪ್ರಯುಕ್ತ ಇಂದು ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಸುವರ್ಧನ್, ಸತೀಶ್ ಸಾಲ್ಯಾನ್, ಮತ್ತು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಮೆಡಿಕಲ್ ಸೂಪರ್ಡೆಂಟ್ ಡಾll ಅವಿನಾಶ್ ಶೆಟ್ಟಿ, ರಕ್ತ ನಿಧಿ ವಿಭಾಗದ ಮುಖ್ಯಸ್ಥೆ ಡಾll ಶಮಿ ಶಾಸ್ತ್ರಿ, ಮತ್ತು ಪ್ರಭುದೇವ ಮಾನೆ, ಜಯ ವಿಠ್ಠಲ್ ಉಪಸ್ಥಿತರಿದ್ದರು.
Kshetra Samachara
24/02/2021 02:09 pm