ಮಂಗಳೂರು: ಬೆಂಗಳೂರಿನಿಂದ ಹೊರಗೆ ಐಟಿ ಉದ್ಯಮವನ್ನು ಬೆಳೆಸಲು ರಾಜ್ಯ ಸರಕಾರ ಪ್ರಯತ್ನಿಸುತ್ತಿದ್ದು, ಈ ಹಿನ್ನೆಲೆ ಮಂಗಳೂರನ್ನು ಅತ್ಯಂತ ಪ್ರಮುಖ ಕ್ಲಸ್ಟರ್ ಆಗಿ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ, ಐಟಿ-ಬಿಟಿ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ನಗರದ ಕೊಡಿಯಾಲಬೈಲ್ನಲ್ಲಿರುವ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ನಡೆದ ಮಂಗಳೂರು ಆವಿಷ್ಕಾರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ಐಟಿ ಉದ್ಯಮಗಳು ಬೆಳೆಯುವುದರ ಜೊತೆಗೆ, ನವೋದ್ಯಮದ ತಾಣವಾಗಿ ಬೆಳೆಯಲಿದೆ. ಇದಕ್ಕೆ ಬೇಕಾದ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದರು.
ರಾಜ್ಯದ ಇತರ ಜಿಲ್ಲೆಗಳಲ್ಲಿ ಆವಿಷ್ಕಾರ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಕೆಡಿಎಂ ರಚಿಸಲಾಗಿದ್ದು, ಈ ಮೂಲಕ ರಾಜ್ಯದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕೆಡಿಎಂ ಕೆಲಸ ಮಾಡುತ್ತದೆ. ಇದರಿಂದ ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿಸುವ ಕಾರ್ಯ ನಡೆಯಲಿದೆ. ಅಲ್ಲದೆ ಈ ಮೂಲಕ ರಾಜ್ಯದ ಐಟಿ ರಫ್ತು ವಹಿವಾಟು 150 ಲಕ್ಷ ಬಿಲಿಯನ್ ಡಾಲರ್ ಮೀರುವ ಗುರಿಯನ್ನು ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Kshetra Samachara
24/02/2021 06:53 pm