ಬೈಂದೂರು: ಕೇಂದ್ರ ಹಾಗೂ ರಾಜ್ಯ ಸರಕಾರದ ಭೂ ಮಸೂದೆ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಫೆ.22ರಂದು ಹೆಜಮಾಡಿಯಲ್ಲಿ ಆರಂಭಗೊಂಡಿದ್ದ ಕಾಂಗ್ರೆಸ್ ನ 'ಜನಧ್ವನಿ' ಪಾದಯಾತ್ರೆ ಫೆ.27ರಂದು ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ಸಮಾರೋಪಗೊಳ್ಳಲಿದೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದ್ದಾರೆ.
Kshetra Samachara
25/02/2021 08:50 am