ಮಂಗಳೂರು: ನಿತ್ಯವೂ ಕರ್ತವ್ಯದಲ್ಲಿದ್ದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ನಿನ್ನೆಯಂತೆ ಇಂದೂ ರಿಲೀಫ್ ದೊರಕಿದ್ದು, ಆರೋಗ್ಯ ತಪಾಸಣೆ, ಕಾನೂನು ಮಾಹಿತಿ ಶಿಬಿರ ಹಾಗೂ ಪಿಲಿಕುಳ ನಿಸರ್ಗಧಾಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ನಿನ್ನೆಯೂ ಮಹಿಳಾ ಸಿಬ್ಬಂದಿಗೆ 'ಪೊಗರು' ಸಿನಿಮಾ ನೋಡಲು ಅವಕಾಶ ನೀಡಲಾಗಿತ್ತು.
ಕಾರ್ಯಕ್ರಮದಲ್ಲಿ ಮೇಯರ್ ದಿವಾಕರ ಪಾಂಡೇಶ್ವರ ಮಾತನಾಡಿ, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ 5 ಲಕ್ಷ ರೂ. ನನ್ನ ಅನುದಾನದಲ್ಲಿ ವಿಶ್ರಾಂತಿ ಧಾಮ ನಿರ್ಮಿಸಲಾಗುತ್ತದೆ ಹಾಗೂ 40 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟೀಕರಣ ಮಾಡಲಾಗುತ್ತದೆ. ಅಲ್ಲದೆ, ಬಂದರ್ ಪೊಲೀಸ್ ಠಾಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 40 ಲಕ್ಷ ರೂ. ವೆಚ್ಚದಲ್ಲಿ ವಿಶ್ರಾಂತಿಧಾಮ ನಿರ್ಮಾಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಇದೀಗ ಸ್ಮಾರ್ಟ್ ಸಿಟಿ ಕಾಮಗಾರಿಗೆ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಕೆಲಸ ಸ್ಥಗಿತಗೊಂಡಿದೆ. ಆದಷ್ಟು ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್., ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
25/02/2021 04:03 pm