ಮಂಗಳೂರು: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ
ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಮಂಗಳೂರಲ್ಲಿ ಪ್ರತಿಭಟನೆ ನಡೆಸಿತು.
ಮಂಗಳೂರಿನ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಕರ್ನಾಟಕದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಹಿತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ಇಲಾಖೆಯ ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ದ ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದರು.
Kshetra Samachara
27/02/2021 03:47 pm