ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಅಂದು ಬೆಲೆಯೇರಿಕೆ ಬಗ್ಗೆ ಬೊಬ್ಬಿಟ್ಟವರು ಇಂದು ಸಚಿವರಾಗಿ ಏನು ಮಾಡುತ್ತಿದ್ದಾರೆ?"

ಮಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಗಗನಕ್ಕೇರಿದೆ. ಈ ಹಿಂದೆ ಪ್ರತಿಪಕ್ಷದಲ್ಲಿದ್ದಾಗ ಬೆಲೆ ಏರಿಕೆ ಬಗ್ಗೆ ಹೇಳಿಕೆ ನೀಡುತ್ತಾ, ಬೊಬ್ಬೆ ಹೊಡೆಯುತ್ತಿದ್ದವರು ಇಂದು ಸಚಿವರಾಗಿ ಏನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ವೇಳೆ ಮಾತನಾಡಿದ ಅವರು,

ಬೆಲೆ ಏರಿಕೆಯಾದ ತಕ್ಷಣ ಇತರ ವಸ್ತುಗಳ ಬೆಲೆಯೂ ಹೆಚ್ಚಾಗಲಿದೆ. ಇದರಿಂದ ಬದುಕು ಸಾಗಿಸುವುದೇ ಕಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಆರಂಭದ ವೇಳೆ ರಾಜ್ಯ ಸರಕಾರ ಅನೇಕ ನೆರವಿನ ಯೋಜನೆಗಳನ್ನು ಘೋಷಿಸಿತ್ತು. ಆದರೆ, ಸರಕಾರ ಈವರೆಗೂ ಆ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಕೊಟ್ಟ ಮಾತನ್ನು ಉಳಿಸದೆ ಕೊರೊನಾ ಸಂದರ್ಭವೂ ಅಧಿಕ ತೆರಿಗೆ ವಸೂಲಿ ಮಾಡುತ್ತಿದೆ ಎಂದು ದೂರಿದರು.

Edited By : Nagesh Gaonkar
Kshetra Samachara

Kshetra Samachara

27/02/2021 07:57 pm

Cinque Terre

17.96 K

Cinque Terre

6

ಸಂಬಂಧಿತ ಸುದ್ದಿ