ಮಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಜೋಕರ್ ಎಂದು ಕರೆದಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರಿಗೆ ಮಂಗಳೂರಿನಲ್ಲಿ ಜಿಲ್ಲಾ ಯುವ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿದರು.
ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸಚಿವ ಯೋಗೇಶ್ವರ್ ಅವರು ವಾಸ್ತವ್ಯವಿದ್ದ ಖಾಸಗಿ ಹೋಟೆಲ್ ಬಳಿ ಜಮಾಯಿಸಿ ರಸ್ತೆ ಪಕ್ಕದಲ್ಲಿ ನಿಂತು ಸಚಿವರ ವಿರುದ್ಧ ಘೋಷಣೆ ಕೂಗಿದರು.
ಬೆಂಗಳೂರಿಗೆ ತೆರಳಲು ಅಣಿಯಾಗುತ್ತಿದ್ದ ಸಚಿವರು, ಯುವ ಜೆಡಿಎಸ್ ಕಾರ್ಯಕರ್ತರನ್ನು ಕಂಡು ತಮ್ಮ ಸರಕಾರಿ ವಾಹನವನ್ನು ಬಿಟ್ಟು, ಬೇರೆ ವಾಹನದಲ್ಲಿ ಪ್ರಯಾಣಿಸಿದರು. ಇದನ್ನರಿತ ಯುವ ಜೆಡಿಎಸ್ ಕಾರ್ಯಕರ್ತರು ಸಚಿವರ ಎಸ್ಕಾರ್ಟ್ ವಾಹನಕ್ಕೆ ಮುತ್ತಿಗೆ ಹಾಕಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.
Kshetra Samachara
28/02/2021 10:45 am