ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈ ನೇತೃತ್ವದಲ್ಲಿ ಬೆಲೆ ಏರಿಕೆ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಬಂಟ್ವಾಳ: ತೈಲ ಬೆಲೆ ಏರಿಕೆ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನ ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ವತಿಯಿಂದ ವಿಭಿನ್ನ ಪ್ರತಿಭಟನೆ ಮಾ.1ರಂದು ಸೋಮವಾರ ನಡೆಯಿತು. ಮೆರವಣಿಗೆಯಲ್ಲಿ ಸರಂಜಾಮುಗಳನ್ನು ಹೊತ್ತ ಕತ್ತೆ ಇದ್ದರೆ, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಎತ್ತಿನಗಾಡಿಯನ್ನೇ ಹೊತ್ತುಕೊಂಡು ಪಾದಯಾತ್ರೆ ಮಾಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾರ್ಗದರ್ಶನದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಭಯ ಬ್ಲಾಕ್ ಗಳ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಲ್ನಡಿಗೆ ಜಾಥಾ ಮತ್ತು ಧರಣಿ ಸತ್ಯಾಗ್ರಹ ಬಂಟ್ವಾಳದಲ್ಲಿ ಸೋಮವಾರ ನಡೆಯಿತು.

ಈ ಸಂದರ್ಭ ಬೆಲೆ ಏರಿಕೆಯ ತಾಪದಿಂದಾಗಿ ವಾಹನಗಳನ್ನು ಬಳಕೆ ಮಾಡುವ ಬದಲು ಹಿಂದಿನ ಕಾಲದಂತೆ ಕತ್ತೆಯಲ್ಲಿ ವಸ್ತುಗಳನ್ನು ಹೇರಿಕೊಂಡು ಬಂದರೆ, ಎತ್ತಿನಗಾಡಿಯನ್ನು ಸ್ವತಃ ರೈ ಅವರೇ ಹೊತ್ತುಕೊಂಡು ಗಮನ ಸೆಳೆದರು. ಕಟ್ಟಿಗೆಯ ಒಲೆಯಲ್ಲಿ ಮಹಿಳಾ ಕಾಂಗ್ರೆಸ್ ಪ್ರಮುಖರಾದ ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ ಮತ್ತಿತರರ ನೇತೃತ್ವದಲ್ಲಿ ಗಂಜಿಯೂಟವನ್ನು ತಯಾರಿಸಿ ಗ್ಯಾಸ್ ಸಿಲಿಂಡರ್ ಉಪಯೋಗಿಸುವ ಸ್ಥಿತಿಯಲ್ಲಿ ಇಲ್ಲ ಎಂಬುದನ್ನು ತಿಳಿಯಪಡಿಸುವ ಕಾರ್ಯ ನಡೆಯಿತು.

Edited By : Manjunath H D
Kshetra Samachara

Kshetra Samachara

01/03/2021 02:41 pm

Cinque Terre

13.23 K

Cinque Terre

0

ಸಂಬಂಧಿತ ಸುದ್ದಿ