ಕುಂದಾಪುರ: ನಾನು ಸಚಿವ ಸ್ಥಾನವನ್ನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಶ್ವಾಸ ಇದ್ದರೆ ನಾನು ಬೆಂಗಳೂರಿಗೆ ಸಚಿವ ಸ್ಥಾನ ಕೇಳಲು ಹೋಗುವುದಿಲ್ಲ. ಯಾರ ಕಾಲಿಗೂ ಬೀಳುವುದಿಲ್ಲ. ಯಾವ ನಾಯಕನ ಹಿಂದೆಯೂ ಸುತ್ತು ಬರುತ್ತಾ ತಿರುಗಾಡಲು ಹೋಗುವುದಿಲ್ಲ. ರಾಜಕೀಯದಲ್ಲಿ ಸಮತೋಲನ ಕಳೆದುಕೊಳ್ಳುವುದಿಲ್ಲ ಎಂದು ಕುಂದಾಪುರದ ವಾಜಪೇಯಿ ಎಂದು ಕರೆಸಿಕೊಳ್ಳುವ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಗುಡುಗಿದ್ದಾರೆ!
ನಾನು ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ ಎಂದಿರುವ ಹಾಲಾಡಿ, ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು.
ಆಗಲೂ ನಾನು ಸಚಿವ ಸ್ಥಾನ ಕೇಳಿರಲಿಲ್ಲ.ರಾಜಕೀಯ ಲಾಬಿ, ಜಾತಿವಾದಿತನ ನಾನು ಮಾಡುವುದಿಲ್ಲ.
ಯಾರ ಕಾಲಿಗೆ ಬಿದ್ದು ನಾನು ಕೆಲಸ ತೆಗೆದುಕೊಳ್ಳುವುದಿಲ್ಲ . ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.
ನಾನು ಮಂತ್ರಿಯಾದರೆ ಸರಕಾರಿ ಕಾರು ತೆಗೆದುಕೊಳ್ಳುವುದಿಲ್ಲ ಎಂದ ಅವರು,ನಾನು ಎಸ್ಕಾರ್ಟ್ ತೆಗೆದುಕೊಳ್ಳುವುದಿಲ್ಲ.
ಗನ್ ಮ್ಯಾನ್ ತೆಗೆದುಕೊಳ್ಳುವುದಿಲ್ಲ. ನನಗೆ ಈವರೆಗೆ ಯಾವುದೇ ಕರೆಗಳು, ಮಾಹಿತಿಗಳು ಬಂದಿಲ್ಲ. ಕರೆ ಬಂದರೆ ನಾನು ಇದನ್ನು ಹೇಳಲು ಸಿದ್ದ ಇದ್ದೇನೆ ಎಂದರು. ನಾನು ಹೆಡ್ಡ ರಾಜಕಾರಣಿ ಅಲ್ಲ. ನನ್ನದು ನೇರನುಡಿಯ ರಾಜಕಾರಣ. ದುರಹಂಕಾರ ಅಲ್ಲ, ನಾನು ಯಾರ ಭಯದಲ್ಲೂ ಇಲ್ಲ ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು. ಕೇಳಿ ಸಚಿವ ಸ್ಥಾನವನ್ನ ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆ ಅಲ್ಲ ಎಂದ ಅವರು, ಕೇಳಿ ಅಧಿಕಾರವನ್ನು ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಲ್ಲ.
ಶ್ವಾಸ ಇದ್ದರೆ ಸಚಿವ ಸ್ಥಾನ ಕೇಳಲು ಹೋಗಲ್ಲ. ನಾನು ಜಾತ್ಯಾತೀತ ರಾಜಕಾರಣಿ. ನನ್ನ ಹುಟ್ಟಿನಿಂದ ನಾನು ಜಾತಿ ಸಂಘಕ್ಕೆ ಹೋಗಿಲ್ಲ.
ಪ್ರಬಲ ಜಾತಿಯಲ್ಲಿ ಹುಟ್ಟಿದ್ದು ಆಕಸ್ಮಿಕ. ಎಲ್ಲಾ ಜಾತಿಯವರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಒಂದು ಜಾತಿಯ ಉದ್ದಾರಕ್ಕಾಗಿ ಜನ ನನ್ನನ್ನು ಗೆಲ್ಲಿಸಿದ್ದಲ್ಲ ಎಂದರು.
ಜಾತಿವಾದಿಗಳು ಯಾವುದೇ ಕಾರಣಕ್ಕೂ ಶಾಸಕರಾಗಬಾರದು. ಜಾತಿವಾದಿಗಳು ಸಾರ್ವತ್ರಿಕ ಚುನಾವಣೆಗೆ ಬರಬಾರದು.
ನನ್ನಲ್ಲಿ ಯಾವುದೇ ನಾಟಕೀಯ ಮಾತುಗಳು ಇಲ್ಲ. ಉಪಯೋಗಕ್ಕೆ ಇಲ್ಲದ್ದನ್ನ ಕೊಟ್ಟರೆ ಕಿಸೆಗೆ ಹಾಕಿಕೊಂಡು ಬರುವುದಿಲ್ಲ.
ಶಾಸಕರು ಹೆರಿಗೆ ಕೋಣೆಯ ದಾದಿಯ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಸತತ ಐದು ಬಾರಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನದ ಮಾತನ್ನು ಬಿಚ್ಚಿಟ್ಟಿದ್ದಾರೆ.
Kshetra Samachara
29/07/2021 08:43 pm