ಮೂಡುಬಿದಿರೆ: ದ.ಕ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯು
ಮೂಡುಬಿದಿರೆ ಕಾಮಧೇನು ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ, ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಪ್ರಚಾರಪಡಿಸುವ ಸಮಾಜಮುಖಿ ಚಿಂತನೆ, ಅಭಿವೃದ್ಧಿ ಕಡೆಯಿನ ಪಯಣ ಬಿಜೆಪಿಯ ಯುವ ಕಾರ್ಯಕರ್ತರದ್ದು. ಪಕ್ಷವು ಕಾರ್ಯಕರ್ತರಿಗೆ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಬೇಕು ಎಂದು ಹೇಳಿದರು.
ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಗುರುದತ್ತ ನಾಯಕ್ ಅಧ್ಯಕ್ಷತೆವಹಿಸಿದರು.
ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಕಾರ್ಯದರ್ಶಿ ಶ್ವೇತಾ , ಜಿಲ್ಲಾ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುದರ್ಶನ್, ಉಪಾಧ್ಯಕ್ಷ ಈಶ್ವರ್ ಕಟೀಲ್, ಯುವ ಮೋರ್ಚಾದ ಜಿಲ್ಲಾ ಪ್ರಭಾರಿಗಳಾದ ಸತೀಶ್ ಕುಂಪಲ, ಪ್ರಜ್ವಲ್ ಶೆಟ್ಟಿ, ಬಿಜೆಪಿ ಮೂಡುಬಿದಿರೆ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಯುವ ಮೋರ್ಚಾದ ಮಂಡಲ ಅಧ್ಯಕ್ಷ ಅಶ್ವತ್ಥ್ ಪಣಪಿಲ ಉಪಸ್ಥಿತರಿದ್ದರು
Kshetra Samachara
30/07/2021 07:15 pm