ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಾಲ ಮಾಡಿ ಮನೆ ಕಟ್ಟುತ್ತಿದ್ದೇನೆ ಎಂದು ಸ್ಪಷ್ಟನೆ ಕೊಟ್ಟ ಶ್ರೀನಿವಾಸ್ ಪೂಜಾರಿ

ಮಂಗಳೂರು: ಆರು ಕೋಟಿ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ಸಾಮಾಜಿಕ ಜಾಲತಾಣಗಳಲ್ಲಿ ವೃಥಾ ಆಪಾದನೆ ಮಾಡಲಾಗುತ್ತಿದ್ದು, ಈ ಕುರಿತು ಸ್ವತಃ ಕೋಟ ಶ್ರೀನಿವಾಸ ಪೂಜಾರಿಯವರೇ ಲೋಕಯುಕ್ತ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಸಚಿವ ಕೋಟ ಲೋಕಾಯುಕ್ತರಿಗೆ ಮನವಿ ಮಾಡಿ, 'ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದ 5ಗುಂಟೆ ಜಮೀನು ನನ್ನ ಸ್ವಂತ ಆದಾಯದ ಖರೀದಿಯಾಗಿದ್ದು, ಸದರಿ ಜಾಗದಲ್ಲಿ ಗ್ರಾಪಂ ಪರವಾನಿಗೆ ಪಡೆದು ಮನೆ ಕಟ್ಟಲಾಗುತ್ತಿದೆ. ಮನೆಯನ್ನು ಸುಮಾರು 60 ಲಕ್ಷ ರೂ. ಮೌಲ್ಯದಲ್ಲಿ ಕಟ್ಟಲು ಅಂದಾಜಿಸಲಾಗಿದ್ದು, ಇದಕ್ಕಾಗಿ ಅಪೆಕ್ಸ್ ಬ್ಯಾಂಕ್ ನಲ್ಲಿ ಎರಡು ವರ್ಷಗಳ ಹಿಂದೆಯೇ 35 ಲಕ್ಷ ರೂ. ಸಾಲವನ್ನು ಪಡೆದಿದ್ದೇನೆ. ಇದನ್ನು ನನ್ನ ಸಂಬಳ ಮತ್ತು ಗೌರವಧನದ ಮೂಲಕ ಸಾಲ ಚುಕ್ತಾ ಮಾಡಿದ್ದೇನೆ. ಇನ್ನು ಇದಕ್ಕೆ ಕಡಿಮೆಯಾದ ಮೊತ್ತಕ್ಕೆ ಬ್ರಹ್ಮಾವರದ ಎಸ್ ಬಿಐ ಶಾಖೆಯಲ್ಲಿ 40 ಲಕ್ಷ ರೂ. ಸಾಲದ ಮಾಡಿದ್ದೇನೆ.

ಆದರೆ ಇದೀಗ ಈ ಮನೆಯನ್ನು ಆರು ಕೋಟಿ ರೂ. ವೆಚ್ಚದಲ್ಲಿ ಕಟ್ಟುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಆದ್ದರಿಂದ ತನ್ನ ಆದಾಯಕ್ಕಿಂತ ಮನೆ ನಿರ್ಮಾಣದ ವೆಚ್ಚ ಹೆಚ್ಚಾದಲ್ಲಿ ತನ್ನ ಮೇಲೆ ಸೂಕ್ತ ಕ್ರಮಕೈಗೊಳ್ಳಬಹುದು. ಇದು ಸುಳ್ಳಾದಲ್ಲಿ ವೃಥಾ ನನ್ನ ಮೇಲೆ ಆರೋಪ ಮಾಡಿ ಸಾರ್ವಜನಿಕ ಜೀವನದಲ್ಲಿ ನನಗೆ ಇರಿಸುಮುರಿಸು ತರುತ್ತಿರುವ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲೋಕಾಯುಕ್ತ ವಿಶ್ವನಾಥ ಶೆಟ್ಟಿಯವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮನವಿ ಮಾಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

30/07/2021 10:33 pm

Cinque Terre

18.92 K

Cinque Terre

11

ಸಂಬಂಧಿತ ಸುದ್ದಿ