ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಭಿವೃದ್ಧಿಗೆ ಸರಕಾರ ಬದ್ಧ: ಉಮಾನಾಥ ಕೋಟ್ಯಾನ್

ಮುಲ್ಕಿ:ಕಿನ್ನಿಗೋಳಿ ಮೆನ್ನಬೆಟ್ಟು ಕಟೀಲು ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಆಗಿ ರೂಪಿತ ವಾಗಿದ್ದು ನಗರಾಭಿವೃದ್ಧಿ ಇಲಾಖೆಯ ಅಧೀನದಲ್ಲಿ ಬರುವ ಪಟ್ಟಣ ಪಂಚಾಯಿತಿಯ "ಸಾರ್ವಜನಿಕ ಮಾಹಿತಿ ಕಾರ್ಯಗಾರ"ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಾಗಾರವನ್ನು ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಸರಕಾರವು ಕಿನ್ನಿಗೋಳಿ ಪಟ್ಟಣ ಪಂಚಾಯತಿ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಹಂತ ಹಂತವಾಗಿ ಅನುಷ್ಠಾನ ಗೊಳಿಸಲಾಗುವುದು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ತಾಲೂಕು ತಹಶಿಲ್ದಾರ್ ಕಮಲಮ್ಮ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ ಯೋಜನಾ ನಿರ್ದೇಶಕರು ಜಿಲ್ಲಾನಗರಾಭಿವೃದ್ದಿ ಕೋಶದ ಗಾಯತ್ರಿ ನಾಯಕ್ ಕೆ.ಎ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ , ಮೂಡಬಿದ್ರೆ ಪುರಸಭೆ ಪರಿಸರ ಅಭಿಯಂತರರಾದ

ಶಿಲ್ಪಾ .ಎಸ್ , ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಿರಿಯ ಅಭಿಯಂತರ ಅಶ್ವಿನಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಗಾರದಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಕಿನ್ನಿಗೋಳಿ, ಮೆನ್ನಬೆಟ್ಟು, ಕಟೀಲು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಂಗನವಾಡಿ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ನಾಗರಿಕರು ಉಪಸ್ಥಿತರಿದ್ದರು.

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯೀಶ್ ಚೌಟ ಪ್ರಾಸ್ತಾವಿಕವಾಗಿ ಮಾತನಾಡಿದರು .ಪುಷ್ಪ ಕಾರ್ಯಕ್ರಮ ನಿರೂಪಿಸಿದರು

Edited By : Manjunath H D
Kshetra Samachara

Kshetra Samachara

31/07/2021 01:18 pm

Cinque Terre

12.34 K

Cinque Terre

0

ಸಂಬಂಧಿತ ಸುದ್ದಿ