ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ವಿಷ ಸೇವಿಸಿ ಕೆ.ಎಫ್.ಡಿ.ಸಿ ಉದ್ಯೋಗಿ ಆತ್ಮಹತ್ಯೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಕಳೆದ ಶನಿವಾರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು.ಆ ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಉಮೇಶ್ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಕೌಟುಂಬಿಕ ಸಮಸ್ಯೆಯಿಂದಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದ್ದು, ಸ್ಪಷ್ಟ ಕಾರಣ ಇನ್ನಷ್ಟೆ ತಿಳಿದುಬರಬೇಕಾಗಿದೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

31/07/2021 02:33 pm

Cinque Terre

9.94 K

Cinque Terre

1

ಸಂಬಂಧಿತ ಸುದ್ದಿ