ಮಂಗಳೂರು: ಖಾಸಗಿ ಬಸ್ ಮಾಲಕರ ಸಂಘವು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸಲ್ಲಿಸಿದ ಮನವಿ ಮೇರೆಗೆ ಜಿಲ್ಲಾಡಳಿತವು ಏಕಪಕ್ಷೀಯವಾಗಿ ಖಾಸಗೀ ಬಸ್ ಪ್ರಯಾಣ ದರವನ್ನು ವಿಪರೀತ ಏರಿಕೆ ಮಾಡಿದ ಆದೇಶವನ್ನು ಖಂಡಿಸಿ ಡಿವೈಎಫ್ಐ, ಸಿಪಿಐಎಂ ಮಂಗಳೂರು ನಗರ ಸಮಿತಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿತು.
ಕೊರೋನಾ ನಿರ್ಬಂಧ, ಸತತ ಲಾಕ್ಡೌನ್ ಗಳಿಂದ ಖಾಸಗೀ ಬಸ್ಸು ಮಾಲಕರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಖಾಸಗೀ ಬಸ್ ಗಳನ್ನು ಪ್ರಯಾಣಕ್ಕಾಗಿ ಬಳಸುವವರು ಬಹುತೇಕ ಕೂಲಿ ಕಾರ್ಮಿಕರು, ಸಣ್ಣ ಪುಟ್ಟ ಅಂಗಡಿ ಮುಂಗಟ್ಟುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿದು ತಿನ್ನುವವರೇ ಜಾಸ್ತಿ. ಇಂತಹ ಬಡ ವಿಭಾಗಕ್ಕೆ ಖಾಸಗೀ ಬಸ್ ಪ್ರಯಾಣ ದರ ವಿಪರೀತ ಏರಿಕೆಯು ತೀವೃ ಹೊರೆಯಾಗಲಿದೆ ಎಂದು ಇದೇ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ , ಡಿವೈಎಫ್ಐ ಮಂಗಳೂರು ನಗರ ಸಮಿತಿ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ನವೀನ್ ಕೊಂಚಾಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Kshetra Samachara
31/07/2021 08:23 pm