ಉಡುಪಿ: ಜನತೆಯ ಆಶಯಕ್ಕೆ ತಕ್ಕಂತೆ ಆಮ್ ಆದ್ಮಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ನಿರ್ಧರಿಸಲಾಗಿದೆ. ಹಾಗೆಯೇ ಇನ್ನು ಮುಂದೆ ಪಕ್ಷವು ಪ್ರತಿಯೊಂದು ಚುನಾವಣೆಯಲ್ಲೂ ಸ್ಪರ್ಧಿಸಲಿದೆ. ಈ ನಿಟ್ಟಿನಲ್ಲಿ ಅಮ್ ಆದ್ಮಿ ಪಕ್ಷವು ರಾಜ್ಯದಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಅದರಂತೆ ಉಡುಪಿ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಉತ್ತಮ ಮತ್ತು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು ,ಈಗಾಗಲೇ ಹಲವು ಕ್ಷೇತ್ರಗಳಿಗೆ ಪಕ್ಷದಿಂದ ಸ್ಪರ್ಧಿಸಲು ಪಕ್ಷದ ಹಲವಾರು ಕಾರ್ಯಕರ್ತರು ಆಕಾಂಕ್ಷಿಗಳಾಗಿದ್ದು, ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಯುತ್ತಿದೆ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಹಲವಾರು ಜನರು ಸಹ ಪಕ್ಷದ ಚಿಹ್ನೆಯಡಿ ಸ್ಪರ್ಧಿಸಲು ಇಚ್ಚಿಸಿ, ಪಕ್ಷವನ್ನು ಸಂಪರ್ಕಿಸಿರುತ್ತಾರೆ.ಎಲ್ಲವನ್ನು ಪರಿಶೀಲಿಸಿ ಉತ್ತಮ ಅಭ್ಯರ್ಥಿಗಳನ್ನು ಪಕ್ಷವು ಜನತೆಯ ಆಯ್ಕೆಗಾಗಿ ಅವರ ಮುಂದಿಡಲಾಗುವುದು.ಉಡುಪಿ ಜಿಲ್ಲೆಯ ಜನತೆ ಅಮ್ ಆದಿ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ರೋಮಿ ಭಾಟಿ, ರಾಜ್ಯ ವೀಕ್ಷಕರು, ವಿಜಯ ಶರ್ಮ, ರಾಜ್ಯ ಉಪಾಧ್ಯಕ್ಷರು ಹಾಗೂ ಸಂಘಟನಾ ಮುಖ್ಯಸ್ಥರು, ದರ್ಶನ್ ಜೈನ್, ರಾಜ್ಯ ಜತೆ ಕಾರ್ಯದರ್ಶಿ,ಅಶೋಕ ಎಡಮಲೆ, ಜಿಲ್ಲಾ ವೀಕ್ಷಕರು, ಉಡುಪಿ ಮತ್ತು ದಕ್ಷಿಣ ಕನ್ನಡ , ಆಶ್ಲೇ ಕೊರ್ನೆಲಿಯೋ ,ಸಂಯೋಜಕರು ಉಡುಪಿ ನಗರ ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Kshetra Samachara
05/08/2021 02:45 pm