ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೊಳ್ನಾಡು ಜಿಲ್ಲಾ ಪಂಚಾಯತ್ ಒಳಪಟ್ಟ ಮಂಚಿ, ಸಾಲೆತ್ತೂರು, ಕೊಳ್ನಾಡು, ಕನ್ಯಾನ, ಕರೋಪಾಡಿ ಈ 5 ಗ್ರಾಮ ಪಂಚಾಯತಿನ ಚುನಾವಣಾ ಪೂರ್ವ ತಯಾರಿ ಸಭೆ ಮಾಜಿ ಸಚಿವರಾದ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು .
ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿದರೆ ಗೆಲುವು ಶತಸಿದ್ದ ಎಂದು ಈ ಸಂದರ್ಭ ರೈ ಹೇಳಿದರು .
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರು ಪಕ್ಷವನ್ನು ಕಟ್ಟಿ ಬೆಳೆಸೋಣ ಎಂದು ಮನವಿ ಮಾಡಿದರು. ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಹಾಯ ಹಸ್ತದ ಉಸ್ತುವಾರಿಯಾದ ಅನಿತಾ ಹೇಮನಾಥ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಬೀರ್ ಸಿದ್ದಕಟ್ಟೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ , ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಯುವ ಅಧ್ಯಕ್ಷರಾದ ಇಬ್ರಾಹಿಂ ನವಾಝ್, ಸೋಮಶೇಖರ್ ಗೌಡ, ಹರ್ಷದ್ ಮತ್ತಿತರರು ಇದ್ದರು.
Kshetra Samachara
05/08/2021 05:33 pm