ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಉಪಾಧ್ಯಕ್ಷರಾಗಿ ದಿನೇಶ್ ಬೆಳ್ಳಾಯರು, ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕುಳಾಯಿ ರನ್ನು ಮಾಜಿ ಸಚಿವರಾದ ಕೆ ಅಭಯಚಂದ್ರ ಜೈನ್ ಮತ್ತು ಚುನಾವಣೆ ಉಸ್ತುವಾರಿ ಮಿಥುನ್ ರೈ ಅವರ ಶಿಫಾರಸಿನ ಮೇರೆಗೆ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆದೇಶ ಪ್ರತಿಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭ ಅವರು ಮಾತನಾಡಿ ಕೊರೊನ ಲಾಕ್ಡೌನ್ ಬಳಿಕ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸರಕಾರದ ಸವಲತ್ತುಗಳನ್ನು ಸರಿಯಾಗಿ ತಲುಪಿಸುವಂತೆ ಸೂಕ್ತ ವ್ಯವಸ್ಥೆ ಮಾಡಿ ಕರ್ತವ್ಯ ನಿರ್ವಹಿಸಿದರೆ ಉತ್ತಮ ಜನಸೇವೆ ಮಾಡಿದಂತೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಲ್ಕಿಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮುಲ್ಕಿ ನ ಪಂ ಸದಸ್ಯ ಪುತ್ತುಬಾವ, ಮಂಜುನಾಥ ಕಂಬಾರ, ಬ್ಲಾಕ್ ಕಾಂಗ್ರೆಸ್ ವಕ್ತಾರ ಬಾಲಚಂದ್ರ ಕಾಮತ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್ ಮೊದಲಾದವರಿದ್ದರು.
Kshetra Samachara
05/08/2021 09:56 pm