ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ: ಹೆಜಮಾಡಿಯಲ್ಲಿ ನೂತನ ಸಚಿವ ವಿ ಸುನಿಲ್ ಕುಮಾರ್ ಅವರಿಗೆ ಅದ್ಧೂರಿಯ ಸ್ವಾಗತ

ಪಡುಬಿದ್ರಿ: ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ ಸುನಿಲ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿಯಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಮಹಿಳಾ ಮೋರ್ಚಾ ಕಾರ್ಯಕರ್ತರು ಆರತಿ ಬೆಳಗಿ ಸ್ವಾಗತ ಕೋರಿದರು.ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ,ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ,ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ,ಯಶ್ಪಾಲ್ ಸುವರ್ಣ ಮುಖಂಡರಾದ ಕುತ್ಯಾರ್ ನವೀನ್ ಶೆಟ್ಟಿ, ಶ್ರೀಶಾ ನಾಯಕ್,ದಿನಕರ್ ಬಾಬು,ಶಿಲ್ಪಾ ಜಿ ಸುವರ್ಣ, ಪ್ರವೀಣ್ ಕುಮಾರ್ ಗುರ್ಮೆ,ಸುರೇಂದ್ರ ಪಣಿಯೂರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

06/08/2021 12:15 pm

Cinque Terre

9.83 K

Cinque Terre

1

ಸಂಬಂಧಿತ ಸುದ್ದಿ