ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹಿಂದುತ್ವ ವಿಚಾರದಲ್ಲಿ ರಾಜಿ ಇಲ್ಲ: ನೂತನ ಸಚಿವ ಸುನಿಲ್ ಕುಮಾರ್

ಕಾರ್ಕಳ: ಸಚಿವರಾಗಿ ಜಿಲ್ಲೆಗೆ ಆಗಮಿಸಿದ ಸುನಿಲ್ ಕುಮಾರ್ ಗೆ ಭರ್ಜರಿ ಸ್ವಾಗತ ನೀಡಲಾಯಿತು.ಈ ವೇಳೆ ಮಾತನಾಡಿದ ಸುನಿಲ್ ಕುಮಾರ್ ,ಸಚಿವನಾಗಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸುತ್ತಿದ್ದೇನೆ.ಉಡುಪಿಗೆ ಬರುತ್ತಿರುವುದು ಸಂತೋಷ, ಭಾವನಾತ್ಮಕ ಕ್ಷಣ.

ಕಾರ್ಕಳ ಕ್ಷೇತ್ರದ ಜನ ಮೂರು ಬಾರಿ ಆಯ್ಕೆ ಮಾಡಿದ್ದರಿಂದ ಸಚಿವನಾದೆ.ಪಕ್ಷ ದೊಡ್ಡ ಪ್ರಮಾಣದ ಹೊಣೆಗಾರಿಕೆಯನ್ನು ಹೆಗಲಿಗೇರಿಸಿದೆ ಎಂದು ಹೇಳಿದ್ದಾರೆ.

ಸಿಎಂ ಮತ್ತು ಪಕ್ಷದ ಹಿರಿಯರು ನಿರೀಕ್ಷೆಯಿಟ್ಟು ಸ್ಥಾನ ಕೊಟ್ಟಿದ್ದಾರೆ.ಜವಾಬ್ದಾರಿ ನಿಭಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

ನನಗೆ ಇಷ್ಟದ ಖಾತೆ ಎಂಬುದು ಇಲ್ಲ.ಮುಖ್ಯಮಂತ್ರಿಗಳು ಕೊಟ್ಟ ಖಾತೆಯನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

ಹಿಂದುತ್ವ ಮತ್ತು ಅಭಿವೃದ್ಧಿ ವಿಚಾರದಲ್ಲಿ ರಾಜಿ ಇಲ್ಲ ಎಂದ ಅವರು,ಹಿಂದುತ್ವವೇ ನನ್ನ ಮೊದಲ ಆಯ್ಕೆ.ಸಚಿವ- ಶಾಸಕ ಸ್ಥಾನ ಆ ನಂತರದ ಆಯ್ಕೆ.ಯಾವುದೇ ಹಂತದಲ್ಲೂ ಹಿಂದುತ್ವ ವಿಚಾರದಲ್ಲಿ ರಾಜಿ ಮಾಡುವುದಿಲ್ಲ ಎಂದು ಉಡುಪಿ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

Edited By : Manjunath H D
Kshetra Samachara

Kshetra Samachara

06/08/2021 02:06 pm

Cinque Terre

21.47 K

Cinque Terre

5

ಸಂಬಂಧಿತ ಸುದ್ದಿ