ಕಾಪು : ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಕಾಪು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪುವಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸಭಾ ನಾಯಕನಾಗಿ, ವಿಪಕ್ಷ ಸದಸ್ಯನಾಗಿ ಸೇವೆ ಸಲ್ಲಿಸುವುದರೊಂದಿಗೆ ಹಿಂದಿನ ಎರಡು ಅವದಿಯಲ್ಲಿ ಸಚಿವನಾಗಿ ಸಲ್ಲಿಸಿದ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಪಕ್ಷ ಅವಕಾಶ ಮಾಡಿಕೊಟ್ಟಿದೆ. ತನಗೆ ಸಿಕ್ಕಿದ ಅವಕಾಶದಲ್ಲಿ ಕೊಟ್ಟ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುದರೊಂದಿಗೆ ಯಾವುದೇ ಖಾತೆಯನ್ನು ನೀಡಿದರೂ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ ಎಂದರು.
ಬಿಜೆಪಿ ಕಾಪು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಂದೀಪ್ ಶೆಟ್ಟಿ ಕಲ್ಯಾ, ಕಾಪು ಪುರಸಭಾ ನಿಕಟ ಪೂರ್ವ ಅಧ್ಯಕ್ಷ ಅನಿಲ್ ಕುಮಾರ್, ಬಿಜೆಪಿ ಕಾಪು ಮಂಡಲ ಉಪಾಧ್ಯಕ್ಷ ನವೀನ್ ಎಸ್.ಕೆ., ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
Kshetra Samachara
06/08/2021 08:10 pm